ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದನವನ: ‘ವಿದ್ಯಾರ್ಥಿ..’ಗಳಿಗೆ ಚಂದನ್‌ ಶೆಟ್ಟಿ ವಿಲನ್‌?

Published 16 ಮೇ 2024, 23:30 IST
Last Updated 16 ಮೇ 2024, 23:30 IST
ಅಕ್ಷರ ಗಾತ್ರ

ಅರುಣ್ ಅಮುಕ್ತ ಆ್ಯಕ್ಷನ್‌ ಕಟ್‌ ಹೇಳಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ರ್‍ಯಾಪರ್‌ ಚಂದನ್‌ ಶೆಟ್ಟಿ ಸಿನಿಮಾದಲ್ಲಿ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆಯೇ ಎನ್ನುವ ಕುತೂಹಲವನ್ನು ಟ್ರೇಲರ್‌ ಉಳಿಸಿದೆ.

ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗುವುದು ಸಾಮಾನ್ಯ. ಆದರೆ ನಿರ್ದೇಶಕ ಅರುಣ್‌ ಟ್ರೇಲರ್‌ ಅನ್ನೇ ಎರಡು ಭಾಗಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ‘ಇದೀಗ ಟ್ರೇಲರ್‌ನ ‘A’ ಭಾಗ ಬಿಡುಗಡೆಗೊಂಡಿದೆ. ಹದಿನೈದು ದಿನಗಳಲ್ಲಿ ಭಾಗ ‘B’ ರಿಲೀಸ್‌ ಆಗಲಿದೆ. ಆದರೆ ಸಿನಿಮಾ ಒಂದೇ ಭಾಗದಲ್ಲಿ ಇರಲಿದೆ’ ಎಂದಿದ್ದಾರೆ. ಜೂನ್‌ನಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ. ಭ್ರಷ್ಟ ರಾಜಕಾರಣಿಯೊಬ್ಬನ ಪುತ್ರನ ಸುತ್ತ ಚಿತ್ರದ ಕಥಾಹಂದರವಿದೆ. ಶೀರ್ಷಿಕೆಯೇ ಹೇಳುವಂತೆ ಇದೊಂದು ಯೂತ್‌ ಸಬ್ಜೆಕ್ಟ್ ಸಿನಿಮಾ. ಕಾಲೇಜು ವಾತಾವರಣ, ಹದಿಹರೆಯದ ಹುಚ್ಚಾಟಗಳು, ಹೊಡೆದಾಟ ಹೀಗೆ ಹಲವು ಅಂಶಗಳನ್ನು ನಿರ್ದೇಶಕರು ಕಟ್ಟಿಕೊಟ್ಟಿದ್ದಾರೆ. ‘ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಸಿನಿಮಾದಲ್ಲಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಃಸ್ಥಿತಿ, ಪೋಷಕರ ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನ ಸಿನಿಮಾದಲ್ಲಿದೆ’ ಎಂದಿದೆ ಚಿತ್ರತಂಡ. 

ಟ್ರೇಲರ್‌ನ ಅಂತ್ಯದಲ್ಲಿ ಚಂದನ್‌ ಶೆಟ್ಟಿ ಪಾತ್ರವನ್ನು ಪರಿಚಯಿಸಲಾಗಿದೆ. ಭಿನ್ನವಾದ ಪಾತ್ರದಲ್ಲಿ ಅವರಿಲ್ಲಿ ಕಾಣಿಸಿಕೊಂಡಿದ್ದು, ಆ ಪಾತ್ರವನ್ನು ಗೌಪ್ಯವಾಗಿ ಇರಿಸಿದೆ ಚಿತ್ರತಂಡ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕುಮಾರ್ ಗೌಡ ಛಾಯಾಚಿತ್ರಗ್ರಹಣ, ‘ಭರ್ಜರಿ’ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT