ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಭಾರತೀಯ ಚಿತ್ರರಂಗದಲ್ಲಿ ಈಗಾಗಲೇ ಸದ್ದು ಮಾಡುತ್ತಿದೆ. ಚಿತ್ರದ ‘ರ..ರ..ರಕ್ಕಮ್ಮ’ ಹಾಡು ಹಾಗೂ ಟ್ರೇಲರ್ ಸಾಮಾಜಿಕ ಮಾಧ್ಯಮಗಳಲ್ಲಿ ಕೋಟ್ಯಂತರ ವೀಕ್ಷಣೆಗಳನ್ನು ಪಡೆದಿದ್ದು, ಇದೇ ಸಂದರ್ಭದಲ್ಲಿಬಾಲಿವುಡ್‌ನ ‘ಬಿಗ್‌ಬಿ’, ಖ್ಯಾತ ನಟ ಅಮಿತಾಬ್ ಬಚ್ಚನ್ ಕೂಡಾ ಸುದೀಪ್‌ಗೆ ಸಾಥ್ ನೀಡಿದ್ದಾರೆ.

ಟ್ವೀಟ್ ಮೂಲಕ ‘ವಿಕ್ರಾಂತ್ ರೋಣ’ ಸಿನಿಮಾದ ಎಲ್ಲ ಭಾಷೆಗಳ ಟ್ರೇಲರ್‌ಗಳ ಗುಚ್ಛವನ್ನು ಅಮಿತಾಬ್ ಅವರು ಶೇರ್ ಮಾಡಿದ್ದು, ‘ಕನ್ನಡದ ಸ್ಟಾರ್ ಸುದೀಪ್ ನಟನೆಯ, ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಐದು ಭಾಷೆಗಳಲ್ಲಿ ಜುಲೈ 28ರಂದು 3ಡಿಯಲ್ಲಿ ಬಿಡುಗಡೆಯಾಗಲಿದೆ’ ಎಂದು ಉಲ್ಲೇಖಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸುದೀಪ್ ಅವರೂ ಅಮಿತಾಬ್ ಬಚ್ಚನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಬಹುಭಾಷಾ ನಟನಾಗಿ ಸುದೀಪ್, ಬಾಲಿವುಡ್ ಅಂಗಳಕ್ಕೂ ಕಾಲಿಟ್ಟಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವೂ ಅದ್ಧೂರಿಯಾಗಿ ಮುಂಬೈನಲ್ಲಿ ನಡೆದಿತ್ತು. ‘ಈಗ’, ‘ರಕ್ತ ಚರಿತ್ರ’ ಹೀಗೆ ತೆಲುಗು, ಹಿಂದಿ ಭಾಷೆ ಸಿನಿಮಾಗಳಲ್ಲಿ ನಟಿಸಿ ಸೈ ಅನಿಸಿಕೊಂಡಿರುವ ಸುದೀಪ್, ಅಮಿತಾಬ್ ಬಚ್ಚನ್ ಅವರ ಜೊತೆಗೂ ತೆರೆಹಂಚಿಕೊಂಡಿದ್ದರು. ಸುದೀಪ್ ಹಾಗೂ ಅಮಿತಾಬ್, ರಾಮ್‌ಗೋಪಾಲ್ ವರ್ಮಾ ನಿರ್ದೇಶನದ ಹಿಂದಿ ಸಿನಿಮಾ ‘ರಣ್’ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು. ಸಿನಿಮಾದಲ್ಲಿ ಬಚ್ಚನ್ ಅವರ ಮಗನ ಪಾತ್ರದಲ್ಲಿ ಸುದೀಪ್ ನಟಿಸಿದ್ದರು. ಇದೀಗ ಬಿಗ್‌ಬಿ ಬೆಂಬಲ ‘ವಿಕ್ರಾಂತ್ ರೋಣ’ ಪ್ರಚಾರಕ್ಕೆ ಮತ್ತಷ್ಟು ಇಂಬು ನೀಡಿದೆ.

ಅನೂಪ್ ಭಂಡಾರಿ ನಿರ್ದೇಶನದ ಈ ಸಿನಿಮಾ ಮೂಲಕ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಹೆಜ್ಜೆ ಇಡುತ್ತಿದ್ದಾರೆ. ರಕೇಲ್ ಡಿಕೋಸ್ಟ ಉರ್ಫ್ ‘ಗಡಂಗ್ ರಕ್ಕಮ್ಮ’ನಾಗಿ ತೆರೆ ಮೇಲೆ ಅವರು ಕಾಣಿಸಿಕೊಂಡಿದ್ದಾರೆ. ನಿರೂಪ್ ಭಂಡಾರಿ ಹಾಗೂ ನೀತಾ ಅಶೋಕ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವು ‘3ಡಿ’ ಯಲ್ಲಿ ತೆರೆಕಾಣಲಿದೆ. ಸ್ವತಃ ಸುದೀಪ್ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನ ಡಬ್ಬಿಂಗ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.