ಸಂಜನಾ ಗಲ್ರಾನಿ ತಂಗಿಗೆ ₹ 50 ಲಕ್ಷ ವಂಚನೆ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಹೆಚ್ಚು ಸುದ್ದಿಯಾಗಿದ್ದ ನಟಿ ಸಂಜನಾ ಗಲ್ರಾನಿ ಅವರ ತಂಗಿ ನಿಕ್ಕಿ ಅವರಿಗೆ ₹ 50 ಲಕ್ಷ ವಂಚನೆಯಾಗಿದ್ದು, ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಂಚನೆ ಸಂಬಂಧ ನಿಕ್ಕಿ ಅವರು ದೂರು ನೀಡಿದ್ದಾರೆ. ಆರೋಪಿ ಹಲಸೂರಿನ ನಿಖಿಲ್ ಹೆಗ್ಡೆ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಕೋರಮಂಗಲದಲ್ಲಿ ರೆಸ್ಟೋರೆಂಟ್ ನಡೆಸಲು ನಿಖಿಲ್ ಹೆಗ್ಡೆ ಜೊತೆ ಸೇರಿ 2016ರಲ್ಲಿ ₹ 50 ಲಕ್ಷ ಹಣ ಹೂಡಿಕೆ ಮಾಡಿದ್ದೆ. ಅದಕ್ಕೆ ಪ್ರತಿಯಾಗಿ ಪ್ರತಿ ತಿಂಗಳು ₹ 1 ಲಕ್ಷ ನೀಡುವುದಾಗಿ ನಿಖಿಲ್ ಭರವಸೆ ನೀಡಿದ್ದರು ಎಂಬುದಾಗಿ ದೂರಿನಲ್ಲಿ ನಿಕ್ಕಿ ತಿಳಿಸಿದ್ದಾರೆ.’
‘ಆರೋಪಿ ಇದುವರೆಗೂ ಯಾವುದೇ ಹಣ ನೀಡಿಲ್ಲ. ₹50 ಲಕ್ಷವನ್ನೂ ವಾಪಸು ಕೊಡುತ್ತಿಲ್ಲ’ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.