ಶುಕ್ರವಾರ, ಸೆಪ್ಟೆಂಬರ್ 25, 2020
22 °C

ಬಾಲಿವುಡ್ ನಟ ಸಂಜಯ್ ದತ್‌ಗೆ ಶ್ವಾಸಕೋಶದ ಕ್ಯಾನ್ಸರ್?

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ನಟ ಸಂಜಯ್ ದತ್‌ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ ಎಂದು ಬಾಲಿವುಡ್ ವಹಿವಾಟು ವಿಶ್ಲೇಷಕ ಕೋಮಲ್ ನಹ್ತಾ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಅಧಿಕೃತ ಮಾಹಿತಿ ಈವರೆಗೆ ತಿಳಿದುಬಂದಿಲ್ಲವಾದರೂ ದತ್ ಅವರು ಶ್ವಾಸಕೋಶದ ಕ್ಯಾನ್ಸರ್‌ನ ಮೂರನೇ ಹಂತದಲ್ಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಅವರು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ ಎಂದೂ ಹೇಳಲಾಗಿದೆ.

ಉಸಿರಾಟದ ಸಮಸ್ಯೆ ಇದ್ದುದರಿಂದ ಇತ್ತೀಚೆಗೆ ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್–19 ವರದಿ ನೆಗೆಟಿವ್ ಬಂದ ಕಾರಣ ಬಳಿಕ ಬಿಡುಗಡೆಯಾಗಿದ್ದರು.

ವೈದ್ಯಕೀಯ ಚಿಕಿತ್ಸೆಗಾಗಿ ಸ್ವಲ್ಪ ಸಮಯ ನಟನೆಯಿಂದ ಬಿಡುವು ಪಡೆಯುವುದಾಗಿಯೂ ಅಭಿಮಾನಿಗಳು ಯಾವುದೇ ತರಹದ ಊಹಾಪೋಹಗಳನ್ನು ಹರಡದಂತೆಯೂ ಸೋಮವಾರ ಟ್ವೀಟ್ ಮಾಡಿದ್ದರು.

ಉಸಿರಾಟ ಸಮಸ್ಯೆಯಿಂದ ಸಂಜಯ್‌ ದತ್‌ ಆಸ್ಪತ್ರೆಗೆ ದಾಖಲು: ಕೋವಿಡ್ ನೆಗೆಟಿವ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು