ಮಂಗಳವಾರ, ಫೆಬ್ರವರಿ 25, 2020
19 °C

ವಿಶ್ವದಾದ್ಯಂತ ಬಿಡುಗಡೆಯಾಗಿ ₹500 ಕೋಟಿ ಗಳಿಸಿದ ‘ಸಂಜು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ರಾಜಕುಮಾರ್‌ ಹಿರಾನಿ ನಿರ್ದೇಶನದ ಬಾಲಿವುಡ್‌ ನಟ ಸಂಜಯ್‌ ದತ್‌ ಅವರ ಜೀವನ ಕತೆ ಆಧರಿಸಿದ ‘ಸಂಜು’ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. 

ಜೂನ್‌ 29ಕ್ಕೆ ಬಿಡುಗಡೆಯಾದ ಚಿತ್ರ ಈವರೆಗೆ ₹500 ಕೋಟಿ ಗಳಿಕೆ ಮಾಡಿದೆ ಎಂದು ಸಿನಿಮಾ ವಿಶ್ಲೇಷಕರು ಅಂದಾಜಿಸಿದ್ದಾರೆ. 

ಚಿತ್ರದಲ್ಲಿ ನಟ ರಣಬೀರ್‌ ಕಪೂರ್‌, ಪರೇಶ್ ರಾವಲ್, ವಿಕ್ಕಿ ಕೌಶಲ್, ದಿಯಾ ಮಿರ್ಜಾ, ಅನುಷ್ಕಾ ಶರ್ಮ, ಸೋನಂ ಕಪೂರ್, ಮನಿಷಾ ಕೊಯಿರಾಲಾ ಕಾಣಿಸಿಕೊಂಡಿದ್ದಾರೆ.

ಚಿತ್ರ ಬಿಡುಗಡೆಗೂ ಮುನ್ನ ಪೋಸ್ಟರ್‌ ಹಾಗೂ ಟ್ರೇಲರ್‌ಗಳ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿತ್ತು. 

 ಬಿಟುಗಡೆಯಾದ ಮೊದಲ ದಿನವೇ ₹34.75 ಕೋಟಿ ಗಳಿಸಿದ್ದ ಚಿತ್ರ, ವಾರಾಂತ್ಯಕ್ಕೆ ₹100 ಕೋಟಿ ಗಳಿಸಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು