ಶನಿವಾರ, ಜನವರಿ 29, 2022
17 °C

ಸುಶಾಂತ್‌ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ: ಸಾರಾ ಅಲಿ ಖಾನ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Sara Ali Khan Instagram Post

ಬೆಂಗಳೂರು: ಸೈಫ್‌ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್‌ಗೆ ಬಂದು ಮೂರು ವರ್ಷಗಳಾಯಿತು. ಈ ಸಂದರ್ಭದಲ್ಲಿ ಅವರು ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ನೆನಪಿಸಿಕೊಂಡಿದ್ದಾರೆ.

ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಸಾರಾ ಅಲಿ ಖಾನ್ ಈ ಬಗ್ಗೆ ಪೋಸ್ಟ್ ಒಂದನ್ನು ಮಾಡಿದ್ದು, ‘ಕೇದಾರ್‌ನಾಥ್‘ ಚಿತ್ರದ ಸನ್ನಿವೇಶವನ್ನು ನೆನಪಿಸಿಕೊಂಡಿದ್ದಾರೆ.

ಕೇದಾರ್‌ನಾಥ್ ಚಿತ್ರದ ಮೂಲಕ ಸಾರಾ ಅವರು ಬಾಲಿವುಡ್ ಪ್ರವೇಶ ಮಾಡಿದ್ದರು.

ಸುಶಾಂತ್ ಅವರೊಬ್ಬ ಉತ್ತಮ ಗೆಳೆಯ, ಮಾರ್ಗದರ್ಶಕ. ನನ್ನ ಸಿನಿಮಾ ಬದುಕಿಗೆ ಅವರು ಮುನ್ನುಡಿ ಬರೆದಿದ್ದರು ಎಂದು ಸಾರಾ ನೆನಪಿಸಿಕೊಂಡಿದ್ದಾರೆ.

ಸುಶಾಂತ್ ಅವರನ್ನು ನಾನಿಂದು ಮಿಸ್ ಮಾಡಿಕೊಳ್ಳುತ್ತಿದ್ದೇನೆ, ಅಂದಿನ ನೆನಪುಗಳು ಇನ್ನೂ ನನ್ನಲ್ಲಿ ಹಸಿರಾಗಿವೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು