1970ರ ದಶಕದ ಕೌಟುಂಬಿಕ ಕಥಾಹಂದರ ಹೊಂದಿರುವ ‘ಸರಳ ಸುಬ್ಬರಾವ್’ ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಗೊಂಡಿದೆ. ಮಂಜು ಸ್ವರಾಜ್ ನಿರ್ದೇಶನದ ಚಿತ್ರದಲ್ಲಿ ಅಜಯ್ ರಾವ್ಗೆ ಮಿಶಾ ನಾರಂಗ್ ಜೋಡಿಯಾಗಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಪ್ರೇಮಗೀತೆಗೆ ಕವಿರಾಜ್ ಸಾಹಿತ್ಯವಿದ್ದು, ಸಂಜಿತ್ ಹೆಗಡೆ ಹಾಡಿದ್ದಾರೆ. ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿದ್ದಾರೆ.

‘ಸರಳ ಮತ್ತು ಸುಬ್ಬರಾವ್ ನಮ್ಮ ಚಿತ್ರದ ನಾಯಕ, ನಾಯಕಿಯ ಹೆಸರು. ಇದು 1971ರಲ್ಲಿ ನಡೆಯುವ ಕಥೆ. ರೆಟ್ರೊ ಶೈಲಿಯ ಕಥೆ ಕೂಡ. ಈ ಕಥೆಗೆ ಅಜಯ್ ರಾವ್ ಅವರೆ ಸೂಕ್ತ ನಾಯಕ ಎನಿಸಿತು. ಇನ್ನೂ ನಮ್ಮ ಚಿತ್ರದ ನಾಯಕಿ ಪಂಜಾಬಿನವರು. ಒಂದು ಸುಂದರ ಸಾಂಸಾರಿಕ ಚಿತ್ರ. ಜತೆಗೆ ಮನರಂಜನೆಯಿದೆ’ ಎಂದರು ನಿರ್ದೇಶಕರು.

‘ಈ ಚಿತ್ರದಲ್ಲಿ ನಟಿಸಿರುವುದು ನನ್ನ ವೈಯ್ಯಕ್ತಿಕ ಹಾಗೂ ವೃತ್ತಿಜೀವನದ ಹೆಮ್ಮೆ. ನಾನು ಚಿಕ್ಕವಯಸ್ಸಿನಲ್ಲಿ ಸೂಪರ್ ಮ್ಯಾನ್ ರೀತಿಯ ಚಿತ್ರಗಳನ್ನು ಹೆಚ್ಚು ನೋಡುತ್ತಿದ್ದೆ. ನಾನೇ ಸೂಪರ್ ಹೀರೊ ಅಂದುಕೊಳ್ಳುತ್ತಿದೆ. ಈ ಚಿತ್ರದಲ್ಲೂ ನಾನು ಸೂಪರ್ ಹೀರೊ. ರೆಟ್ರೊ ಶೈಲಿಯ ಉಡುಗೆಗಳನ್ನು ಹಾಕಿದಾಗ ನಾನು ನನ್ನ ಪಾತ್ರದಲ್ಲಿ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್ ಅವರನ್ನು ನೋಡಿದೆ’ ಎಂದರು ಅಜಯ್ ರಾವ್.

ರಂಗಾಯಣ ರಘು, ವೀಣಾ ಸುಂದರ್, ಶ್ರೀ, ರಘು ರಾಮನಕೊಪ್ಪ, ವಿಜಯ್ ಚಂಡೂರ್ ಮುಂತಾದವರು ಚಿತ್ರದಲ್ಲಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಚಿತ್ರಗ್ರಹಣ, ಬಸವರಾಜ್ ಅರಸ್ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.