ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರಿಲೇರು ನೀಕೆವ್ವರು’ರಶ್ಮಿಕಾ ಫೋಟೊ ವೈರಲ್‌

Last Updated 11 ನವೆಂಬರ್ 2019, 19:40 IST
ಅಕ್ಷರ ಗಾತ್ರ

ಪ್ರಿನ್ಸ್‌ ಮಹೇಶ್‌ ಬಾಬು ನಾಯಕನಾಗಿ ಅಭಿನಯಿಸುತ್ತಿರುವ ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ನಾಯಕಿಯಾಗಿ ನಟಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ ಎಂಥಹದು ಎಂಬ ಕುತೂಹಲ ಉಂಟಾಗಿತ್ತು. ಈಗ ಅದಕ್ಕೆಲ್ಲಾ ಉತ್ತರ ಸಿಕ್ಕಿದ್ದು, ಆ ಚಿತ್ರದಲ್ಲಿ ರಶ್ಮಿಕಾ ಚಿತ್ರೀಕರಣದಲ್ಲಿ ಪಾಲ್ಗೊಂಡ ಕೆಲ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಈ ಚಿತ್ರದ ಶೂಟಿಂಗ್‌ ಕೇರಳದಲ್ಲಿ ನಡೆಯುತ್ತಿದೆ.

ಇತ್ತೀಚೆಗೆ ಚಿತ್ರತಂಡ ಹೈದಾರಾಬಾದ್‌ನಲ್ಲಿ ಶೂಟಿಂಗ್‌ಮುಗಿಸಿತ್ತು. ಸದ್ಯದಲ್ಲೇ ರಶ್ಮಿಕಾ ಪಾತ್ರದ ಬಗ್ಗೆ ಫಸ್ಟ್‌ಲುಕ್‌ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಅದಕ್ಕಿಂತ ಮೊದಲೇ ಚಿತ್ರಕ್ಕೆ ಸಂಬಂಧಿಸಿದ ಕೆಲ ಫೋಟೊಗಳು ಲೀಕ್‌ ಆಗಿವೆ.

ಈ ಫೋಟೊಗಳಲ್ಲಿ ಸೀರೆ ಉಟ್ಟುಕೊಂಡಿರುವ ರಶ್ಮಿಕಾ, ಸಾಂಪ್ರದಾಯಿಕ ಯುವತಿ ಪಾತ್ರದಲ್ಲಿ ಕಾಣಿಸಿದ್ದಾರೆ. ಮುದ್ದುಮುದ್ದಾಗಿ ಕಾಣಿಸುತ್ತಿದ್ದಾರೆ ಎಂದು ಅವರ ಅಭಿಮಾನಿಗಳು ಕಮೆಂಟ್‌ ಮಾಡಿದ್ದಾರೆ.

ಅನಿಲ್‌ ರವಿಪುಡಿ ಅವರ ನಿರ್ದೇಶನದ ಈ ಚಿತ್ರದಲ್ಲಿ ವಿಜಯಶಾಂತಿ, ಪ್ರಕಾಶ್‌ ರಾಜ್‌, ಸಂಗೀತಾ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಕೇರಳದಲ್ಲಿ ಚಿತ್ರೀಕರಣ ನಡೆಯುತ್ತಿರುವ ಫೋಟೊವೊಂದನ್ನು ಅಭಿಮಾನಿಯೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಈ ಸಿನಿಮಾದಲ್ಲಿ ನಟಿ ತಮನ್ನಾ ಹಾಡೊಂದಕ್ಕೆ ಹೆಜ್ಜೆ ಹಾಕಲಿರುವುದು ವಿಶೇಷ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT