ಸಾಮಾಜಿಕ ಕಥಾಹಂದರ ಹೊಂದಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಗೀತೆ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಚಿತ್ರೀಕರಣ ಮುಗಿಸಿ ಬಿಡುಗಡೆ ಹಂತದಲ್ಲಿರುವ ಚಿತ್ರಕ್ಕೆ ಸಾತ್ವಿಕ್ ಪವನ್ ಕುಮಾರ್ ನಿರ್ದೇಶನವಿದೆ.

‘ಸಿನಿಮಾ ಎಂಬುದು ಬಹಳ ಪ್ರಭಾವಶಾಲಿ ಮಾಧ್ಯಮ. ಸಿನಿಮಾಗಳ ಮೂಲಕ ವಾಸ್ತವ ವಿಷಯಗಳನ್ನು ಬಹಳ ಬೇಗ ಜನರಿಗೆ ತಲುಪಿಸಬಹುದು. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ವಾಸ್ತವ ಸ್ಥಿತಿಯನ್ನು ಹೇಳಲು ಹೊರಟಿರುವುದು ಶ್ಲಾಘನೀಯ. ಜನ ಸಾಮಾನ್ಯರು, ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿವೆ. ಆದರೆ, ಈ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಈ ಬಗ್ಗೆ ಚಿತ್ರ ಜನ ಜಾಗೃತಿ ಮೂಡಿಸಿ, ಯಶಸ್ವಿಯಾಗಲಿ’ ಎಂದರು ಸಿದ್ದರಾಮಯ್ಯ.

ಕುಮಾರ್ ಬಂಗಾರಪ್ಪ, ರಾಗಿಣಿ ದ್ವಿವೇದಿ, ದೊಡ್ಡಣ್ಣ ಮುಂತಾದವರು ಚಿತ್ರದ ಪ್ರಮುಖ ಪಾತ್ರದಲ್ಲಿದ್ದಾರೆ. ‘ಶೀರ್ಷಿಕೆಯೇ ಹೇಳುವಂತೆ, ಇದು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರದ ಚಿತ್ರ. ಪಕ್ಕಾ ಗ್ರಾಮೀಣ ಸೊಗಡಿನ ಕಥೆಯನ್ನು ಹೊಂದಿದೆ. ಪೂರ್ತಿ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲೇ ನಡೆಸಿದ್ದೇವೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಚಿತ್ರ ತೆರೆಗೆ ಬರಲಿದೆ’ ಎಂದರು ನಿರ್ದೇಶಕ.

‘ಜಯಶಂಕರ ಟಾಕೀಸ್’ ಬ್ಯಾನರಿನಲ್ಲಿ ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಹಾಡುಗಳಿಗೆ ಅನಂತ್ ಆರ್ಯನ್ ಸಂಗೀತವಿದೆ. ಬಿ. ರಾಮಮೂರ್ತಿ ಕಥೆ, ಚಿತ್ರಕಥೆಯಿರುವ ಚಿತ್ರಕ್ಕೆ ನಿರ್ದೇಶಕರದ್ದೇ ಛಾಯಚಿತ್ರಗ್ರಹಣವಿದೆ.v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-51-1322315830

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.