ಭದ್ರಾವತಿ: ‘ಪಡಿತರ ವಿತರಣಾ ವ್ಯವಸ್ಥೆ ಸರಾಗವಾಗಿ ಕಾರ್ಯ ನಿರ್ವಹಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನ್ಯಾಯಬೆಲೆ ಅಂಗಡಿ ಮಾಲೀಕರು ಎದುರಿಸುತ್ತಿರುವ ಬವಣೆಗಳನ್ನು ಬಿಂಬಿಸುವ ಚಲನಚಿತ್ರ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ರಾಜ್ಯದಾದ್ಯಂತ ಶೀಘ್ರವೇ ತೆರೆ ಕಾಣಲಿದೆ’ ಎಂದು ಕರ್ನಾಟಕ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಹೇಳಿದರು.

‘ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಅವರ ಕುಟುಂಬ ವರ್ಗದವರಿಗಾಗಿ ಚಿತ್ರದ ವಿಶೇಷ ಪ್ರದರ್ಶನವನ್ನು ರಾಜ್ಯದ ಆಯ್ದ ಚಿತ್ರಮಂದಿರಗಳಲ್ಲಿ ಜೂನ್ 1 ಮತ್ತು 2ರಂದು ಆಯೋಜಿಸಲಾಗಿದೆ. ನಂತರ ಚಿತ್ರವನ್ನು ಸಾರ್ವಜನಿಕ ವೀಕ್ಷಣೆಗೆ ಬಿಡುಗಡೆ ಮಾಡಲಾಗುವುದು’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆ ಗ್ರಾಮ ಹಾಗೂ ಬೆಂಗಳೂರಿನಲ್ಲಿ ನಡೆಸಲಾಗಿದೆ. ಕುಮಾರ್ ಬಂಗಾರಪ್ಪ, ರಾಗಿಣಿ ದ್ವಿವೇದಿ, ದೊಡ್ಡಣ್ಣ, ರೋಹಿತ್ ಶ್ರೀನಾಥ್ ಮುಖ್ಯ ಪಾತ್ರವರ್ಗದಲ್ಲಿದ್ದಾರೆ. ಚಿತ್ರವನ್ನು ಸಾತ್ವಿಕ್ ಪವನ್ ಕುಮಾರ್ ನಿರ್ದೇಶಿಸಿದ್ದು, ಬಿ. ರಾಮಮೂರ್ತಿ ಚಿತ್ರಕಥೆ ಬರೆದಿದ್ದಾರೆ. ಅನಂತ್ ಆರ್ಯನ್ ಸಂಗೀತ ನೀಡಿದ್ದಾರೆ’ ಎಂದು ತಿಳಿಸಿದರು.

ಚಿತ್ರ ನಿರ್ಮಾಪಕರಾದ ತೇಜು ಮೂರ್ತಿ, ಪದ್ಮಾವತಿ ಚಂದ್ರಶೇಖರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ. ಹರೀಶ್, ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಪದಾಧಿಕಾರಿಗಳಾದ ಸಿದ್ದಲಿಂಗಯ್ಯ, ನಾಗೇಶ್ ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-42-337038259

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.