ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರು ವಾರಿ ಪಾಟ ಟ್ರೈಲರ್ ಬಿಡುಗಡೆ: ಕುತೂಹಲ ಮೂಡಿಸಿದ ಮಹೇಶ್ ಬಾಬು

ಅಕ್ಷರ ಗಾತ್ರ

ಬೆಂಗಳೂರು:ತೆಲುಗು ನಟ ಮಹೇಶ್‌ ಬಾಬು ಅಭಿನಯದ ಬಹುನಿರೀಕ್ಷಿತ ಚಿತ್ರ ‘ಸರ್ಕಾರು ವಾರಿ ಪಾಟ’ದ ಟ್ರೈಲರ್ ಬಿಡುಗಡೆಯಾಗಿದ್ದು ಅಭಿಮಾನಿಗಳ ಮನ ಗೆಲ್ಲುತ್ತಿದೆ.

ಚಿತ್ರ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ತನ್ನ ಯೂಟ್ಯೂಬ್‌ ಚಾನಲ್‌ನಲ್ಲಿ ಟ್ರೈಲರ್ ಬಿಡುಗಡೆ ಮಾಡಿದೆ.ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ 'ಸರ್ಕಾರು ವಾರಿ ಪಾಟ' ಕೂಡ ಒಂದಾಗಿದೆ. ಈಗಾಗಲೇ ಚಿತ್ರದ ಬಹುತೇಕ ಹಾಡುಗಳು ಸೂಪರ್ ಹಿಟ್ ಆಗಿವೆ.

ಟ್ರೈಲರ್ ನೋಡಿದಾಗ ಚಿತ್ರದ ಕಥೆ ಏನೇಂಬುದರ ಸುಳಿವು ಸಿಗುವುದಿಲ್ಲ. ಆದರೆ, ವಿಭಿನ್ನ ಕಥೆಯೊಂದಿಗೆ ಈ ಸಾರಿ ಮಹೇಶ್‌ಬಾಬು ಎಂಟ್ರಿ ಕೊಡುತ್ತಿದ್ದಾರೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.

‘ಸರ್ಕಾರು ವಾರಿ ಪಾಟ’ ಚಿತ್ರವನ್ನು ಜ.13ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಕೋವಿಡ್ ಕಾರಣದಿಂದಾಗಿ ಬಿಡುಗಡೆ ದಿನಾಂಕವನ್ನು ಮೇ 12ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಮೇ 12 ಗುರುವಾರ ಚಿತ್ರ ಬಿಡುಗಡೆಯಾಗಲಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾಕ್ಕೆ ಗೀತಾ ಗೋವಿಂದಂ ಖ್ಯಾತಿಯ ಪರಶುರಾಮ್‌ ಅವರ ಚಿತ್ರಕಥೆ, ನಿರ್ದೇಶನವಿದೆ. ಈ ಸಿನಿಮಾವನ್ನು ಮೈತ್ರಿ ಮೂಮಿ ಮೇಕರ್ಸ್‌ನವರು ನಿರ್ಮಾಣ ಮಾಡುತ್ತಿದ್ದಾರೆ. ಎಸ್ಎಸ್ ತಮನ್ ಸಂಗೀತ ನಿರ್ದೇಶನವಿದೆ. ಮಹೇಶ್‌ ಬಾಬುಗೆ ಜೋಡಿಯಾಗಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್‌ ನಟಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT