‘ಸರ್ಕಾರು ವಾರಿ ಪಾಟ’ ಬಿಡುಗಡೆಗೆ ಸಿದ್ಧತೆ: ಸೆನ್ಸಾರ್ ಮಂಡಳಿಯತ್ತ ಎಲ್ಲರ ಚಿತ್ತ

ಹೈದರಾಬಾದ್: ತೆಲುಗು ನಟ ಮಹೇಶ್ ಬಾಬು ಅಭಿನಯದ ಬಹುನಿರೀಕ್ಷಿತ ಚಿತ್ರ ‘ಸರ್ಕಾರು ವಾರಿ ಪಾಟ’ ಬಿಡುಗಡೆಗೆ ಸಜ್ಜಾಗಿದ್ದು, ಸೆನ್ಸಾರ್ ಮಂಡಳಿಯತ್ತ ಚಿತ್ರತಂಡದ ಚಿತ್ತ ನೆಟ್ಟಿದೆ.
‘ಸರ್ಕಾರು ವಾರಿ ಪಾಟ’ ಸಿನಿಮಾಕ್ಕೆ ಗೀತಾ ಗೋವಿಂದಂ ಖ್ಯಾತಿಯ ಪರಶುರಾಮ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಎಸ್.ಎಸ್ ತಮನ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಮಹೇಶ್ ಬಾಬುಗೆ ಜೋಡಿಯಾಗಿ ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ಕೋವಿಡ್ ಕಾರಣದಿಂದಾಗಿ ಚಿತ್ರ ಬಿಡುಗಡೆ ದಿನಾಂಕವನ್ನು ಹಲವು ಬಾರಿ ಮುಂದೂಡಲಾಗಿತ್ತು. ಇದೀಗ ಮೇ 12ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡದ ಸಿದ್ಧತೆ ಮಾಡಿಕೊಂಡಿದೆ.
ಈ ಸಿನಿಮಾ ಆಕರ್ಷಕ ಟ್ರೇಲರ್ ಮತ್ತು ಪೋಸ್ಟರ್ಗಳ ಮೂಲಕ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಓದಿ... ದಂಗಲ್ ದಾಖಲೆ ಉಡೀಸ್ ಮಾಡಿದ ಯಶ್: ಹಿಂದಿಯಲ್ಲಿ ಹೆಚ್ಚು ಹಣ ಗಳಿಸಿದ 2ನೇ ಚಿತ್ರ KGF
ಓದಿ...
ನೆಲ್ಸನ್ ನಿರ್ದೇಶನದ ಹೊಸ ಚಿತ್ರದಲ್ಲಿ ರಜನಿಕಾಂತ್ –ಶಿವರಾಜ್ಕುಮಾರ್ ನಟನೆ?
ಕ್ರೀಡಾಂಗಣದಲ್ಲಿ ಆರ್ಸಿಬಿ ಅಭಿಮಾನಿಗೆ ಪ್ರೇಮ ನಿವೇದನೆ ಮಾಡಿದ ಯುವತಿ: ವಿಡಿಯೊ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.