ಭಾನುವಾರ, ಜುಲೈ 3, 2022
27 °C

ಸರ್ಕಾರು ವಾರಿ ಪಾಟ Twitter Review: ಮಹೇಶ್–ಕೀರ್ತಿ ನಟನೆಗೆ ‘ಸೈ’ ಎಂದ ಪ್ರೇಕ್ಷಕ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

‌ಹೈದರಾಬಾದ್: ತೆಲುಗು ನಟ ಮಹೇಶ್‌ ಬಾಬು ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಸರ್ಕಾರು ವಾರಿ ಪಾಟ’ ಇಂದು (ಗುರುವಾರ) ವಿಶ್ವದಾದ್ಯಂತ ತೆರೆಕಂಡಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

‘ಗೀತಾ ಗೋವಿಂದಂ’ ಖ್ಯಾತಿಯ ಪರಶುರಾಮ್‌ ಆ್ಯಕ್ಷನ್‌ ಕಟ್‌ ಹೇಳಿರುವ ಈ ಸಿನಿಮಾದಲ್ಲಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದು. ಕೋವಿಡ್‌ ಕಾರಣದಿಂದ ಚಿತ್ರ ಬಿಡುಗಡೆಯನ್ನು ಹಲವು ತಿಂಗಳು ಮುಂದೂಡಲಾಗಿತ್ತು. 

ಓದಿ: 

ಈ ಸಿನಿಮಾದ ಫಸ್ಟ್ ಡೇ ಫಸ್ಟ್ ಶೋ ವೀಕ್ಷಿಸಿರುವ ಅಭಿಮಾನಿಗಳು ಚಿತ್ರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರದ ಮೊದಲಾರ್ಧ ಚೆನ್ನಾಗಿ ಮೂಡಿಬಂದಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು ಮಹೇಶ್‌ ಬಾಬು –ಕೀರ್ತಿ ಸುರೇಶ್ ಅಭಿನಯ ಚೆನ್ನಾಗಿದೆ, ಚಿತ್ರ ‘ಬ್ಲಾಕ್ ಬಸ್ಟರ್‌’ ಎಂದು ಹೇಳಿಕೊಂಡಿದ್ದಾರೆ. 

ಇತ್ತೀಚೆಗೆ ಬಿಡುಗಡೆಗೊಂಡಿದ್ದ ಚಿತ್ರದ ಟ್ರೇಲರ್ ಹಾಗೂ ಪೋಸ್ಟರ್‌ಗಳು ಅಭಿಮಾನಿಗಳ ಗಮನ ಸೆಳೆದಿದ್ದವು.

ಈ ಸಿನಿಮಾಗೆ ಎಸ್.ಎಸ್. ತಮನ್ ಸಂಗೀತ ಸಂಯೋಜಿಸಿದ್ದಾರೆ. ‘ಮೈತ್ರಿ ಮೂವಿ ಮೇಕರ್ಸ್‌’ ಚಿತ್ರ ನಿರ್ಮಿಸಿದೆ.

ಓದಿ... ಅಬ್ಬಾಬ್ಬಾ... ತೆಲುಗು ನಟ ಮಹೇಶ್‌ ಬಾಬು ಸಂಭಾವನೆ ಎಷ್ಟು ಕೋಟಿ? ಇಲ್ಲಿದೆ ಮಾಹಿತಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು