ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸತ್ಯಂ ಶಿವಂ’ ಎಂದ ನಟ ಯತಿರಾಜ್‌

Published 19 ಅಕ್ಟೋಬರ್ 2023, 23:30 IST
Last Updated 19 ಅಕ್ಟೋಬರ್ 2023, 23:30 IST
ಅಕ್ಷರ ಗಾತ್ರ

ಪತ್ರಕರ್ತ ಹಾಗೂ ನಟ ಯತಿರಾಜ್ ನಿರ್ದೇಶನದ ‘ಸತ್ಯಂ ಶಿವಂ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.

‘ಸತ್ಯಂ ಶಿವಂ’ ಎಂದರೆ ಎರಡು ಪಾತ್ರಗಳ ಹೆಸರಲ್ಲ. ನಮ್ಮೊಳಗಿರುವ ಕೆಟ್ಟದ್ದನ್ನು ಹೊರಗೆ ಹಾಕಿ, ನಿಶ್ಕಲ್ಮಶವಾದಾಗ ಸತ್ಯದ ದರ್ಶನವಾಗಿ ಶಿವನ ಅನುಭೂತಿಯಾಗುತ್ತದೆ ಎಂಬುದು ಕಥೆಯ ಸಾರಾಂಶ. ಸಸ್ಪೆನ್ಸ್, ಥ್ರಿಲ್ಲರ್, ಸೆಂಟಿಮೆಂಟ್ ಎಲ್ಲವೂ ಇರುವ ಚಿತ್ರ. ನಿರ್ಮಾಪಕರೂ ಆಗಿರುವ ಬುಲೆಟ್ ರಾಜು ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ’ ಎಂದರು ನಿರ್ದೇಶಕರು.

ಚಿತ್ರಕ್ಕೆ ವಿ.ಮನೋಹರ್ ಸಂಗೀತ, ವಿದ್ಯಾ ನಾಗೇಶ್ ಛಾಯಾಗ್ರಹಣವಿದೆ. ಸಂಜನಾ ನಾಯ್ಡು, ಮೈಕೋ ನಾಗರಾಜ್, ಅರವಿಂದ್ ರಾವ್ ಮೊದಲಾದವರು ಚಿತ್ರದಲ್ಲಿದ್ದಾರೆ.

ಚಿತ್ರದಿಂದ ತುಕಾಲಿ ಸಂತೋಷ್‌ ಉಚ್ಚಾಟನೆ
‘ಬಿಗ್​ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿರುವ ತುಕಾಲಿ ಸಂತೋಷ್‌ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನಮ್ಮ ಈ ಸಿನಿಮಾದಲ್ಲಿಯೂ ಮೊದಲಿಗೆ ಅವರು ನಾಯಕರಾಗಿದ್ದರು. ಆದರೆ ಚಿತ್ರೀಕರಣಕ್ಕೆ ಬಹಳ ತೊಂದರೆ ಉಂಟುಮಾಡಿದರು. ಹೀಗಾಗಿ ಅವರನ್ನು ಚಿತ್ರದಿಂದ ಹೊರಗಿಡಲಾಯಿತು’ ಎಂದು ಯತಿರಾಜ್‌ ಬೇಸರತೋಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT