ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಹಮಾರೆ ಬಾರಾಹ್‌’ಗೆ ಆಕ್ಷೇಪ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

Published 21 ಜೂನ್ 2024, 13:57 IST
Last Updated 21 ಜೂನ್ 2024, 13:57 IST
ಅಕ್ಷರ ಗಾತ್ರ

ನವದೆಹಲಿ: ಅನ್ನೂ ಕಪೂರ್ ನಟನೆಯ ‘ಹಮಾರೆ ಬಾರಾಹ್‌’ ಚಲನಚಿತ್ರದ ಕೆಲ ಸಂಭಾಷಣೆ ಮತ್ತು ದೃಶ್ಯಗಳು ವಿವಾದಿತವಾಗಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿತು.

ಚಿತ್ರದಲ್ಲಿನ ಕೆಲ ಆಕ್ಷೇಪಾರ್ಹ ಅಂಶಗಳನ್ನು ಕೈಬಿಡಲು ನಿರ್ಮಾಪಕರು ಒಪ್ಪಿದ ಕಾರಣ ಚಿತ್ರದ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಜೂನ್‌ 19ರಂದು ಅನುಮತಿ ನೀಡಿತ್ತು.

ಇದನ್ನು ಪ್ರಶ್ನಿಸಿ ರಿಟ್‌ ಸಲ್ಲಿಸಲಾಗಿತ್ತು. ಅರ್ಜಿ ಪರಿಶೀಲನೆಗೆ ಬಂದಾಗ ನ್ಯಾಯಮೂರ್ತಿಗಳಾದ ವಿಕ್ರಂನಾಥ್ ಮತ್ತು ಎಸ್‌.ವಿ.ಎನ್.ಭಟ್ಟಿ ಅವರಿದ್ದ ಪೀಠವು, ಅರ್ಜಿ ಹಿಂಪಡೆಯಲು ಅರ್ಜಿದಾರರಿಗೆ ಅವಕಾಶ ಕಲ್ಪಿಸಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT