ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಮಾರೆ ಬಾರಹ್: ಚಿತ್ರದ ವಿರುದ್ಧ ಸಲ್ಲಿಕೆಯಾದ ಅರ್ಜಿಗಳನ್ನು ಪುರಸ್ಕರಿಸಲು SC ನಕಾರ

Published 21 ಜೂನ್ 2024, 10:29 IST
Last Updated 21 ಜೂನ್ 2024, 10:29 IST
ಅಕ್ಷರ ಗಾತ್ರ

ನವದೆಹಲಿ: ಅನ್ನು ಕಪೂರ್ ಮುಖ್ಯಭೂಮಿಕೆಯ ಬಾಲಿವುಡ್ ಚಿತ್ರ ‘ಹಮಾರೆ ಬಾರಹ್’ ಚಿತ್ರದಲ್ಲಿನ ಕೆಲ ವಿವಾದಾತ್ಮಕ ದೃಶ್ಯ ಹಾಗೂ ಸಂಭಾಷಣೆಯನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಚಿತ್ರದಲ್ಲಿನ ಕೆಲವೊಂದು ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಚಿತ್ರ ತಯಾರಕರು ಒಪ್ಪಿಕೊಂಡ ನಂತರ ಚಲನಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಜೂನ್ 19ರಂದು ಅನುಮತಿಸಿತ್ತು.

ಇದೇ ವಿಷಯವಾಗಿ ಸಲ್ಲಿಕೆಯಾದ ಅರ್ಜಿಯು ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್ ಹಾಗೂ ಎಸ್‌.ವಿ.ಎನ್.ಭಟ್ಟಿ ಅವರಿದ್ದ ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠದ ಎದುರು ಶುಕ್ರವಾರ ಬಂದಿತು. ಇದರ ವಿಚಾರಣೆ ನಡೆಸಲಾಗದು ಎಂದ ನ್ಯಾಯಪೀಠ, ಅರ್ಜಿಯನ್ನು ಹಿಂಪಡೆಯಲು ಅವಕಾಶ ನೀಡಿತು.

‘ಈ ಚಿತ್ರದ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಆಕ್ಷೇಪಣೆಗಳಿದ್ದಲ್ಲಿ ಅದನ್ನು ಅಲ್ಲಿಯೇ ಪ್ರಶ್ನಿಸುವಂತೆ’ ಅರ್ಜಿದಾರರ ಪರ ವಕೀಲರಿಗೆ ಪೀಠ ಹೇಳಿತು.

ಇಸ್ಲಾಂನ ನಂಬಿಕೆ ಹಾಗೂ ವಿವಾಹಿತ ಮುಸ್ಲಿಂ ಮಹಿಳೆಯರ ಕುರಿತು ಚಿತ್ರದಲ್ಲಿ ಆಕ್ಷೇಪಾರ್ಹ ದೃಶ್ಯಗಳಿವೆ ಎಂದು ಆರೋಪಿಸಿ ಜೂನ್ 14ರಂದು ಬಿಡುಗಡೆಯಾಗಬೇಕಿದ್ದ ಚಿತ್ರಕ್ಕೆ ನ್ಯಾಯಾಲಯ ತಡೆ ನೀಡಿತ್ತು. ಹೈಕೋರ್ಟ್‌ನ ವಿಭಾಗೀಯ ಪೀಠವು ಚಿತ್ರವನ್ನು ವೀಕ್ಷಿಸಿ ಕೆಲವೊಂದು ದೃಶ್ಯಗಳನ್ನು ಬದಲಿಸಲು ಸಲಹೆ ನೀಡಿತು. ಇದಕ್ಕೆ ಅರ್ಜಿದಾರರು ಒಪ್ಪಿದ ನಂತರ, ಚಿತ್ರ ಬಿಡುಗಡೆಗೆ ಹೈಕೋರ್ಟ್‌ ಅನುಮತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT