ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ಕೇರಿ ಫಾರೆಸ್ಟ್‌’ ಫೆ. 26ರಂದು ತೆರೆಗೆ

Last Updated 30 ಜನವರಿ 2021, 6:46 IST
ಅಕ್ಷರ ಗಾತ್ರ

ಕುತೂಹಲಕಾರಿ ಕಥಾಹಂದರದವಿರುವ ಚಿತ್ರ ‘ಸ್ಕೇರಿ ಫಾರೆಸ್ಟ್‌’ ಫೆ. 26ರಂದು ತೆರೆಗೆ ಬರಲಿದೆ.

ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಸ್ನೇಹಿತ - ಸ್ನೇಹಿತೆಯರು ಸಂಶೋಧನೆಗಾಗಿ ಕಾಡಿಗೆ ತೆರಳುತ್ತಾರೆ. ‌ಆಗ ಆ‌ ಕಾಡಿನಲ್ಲಿ ಏನು ನಡೆಯುತ್ತದೆ ಎನ್ನುವುದು ಈ ಚಿತ್ರದ ಕಥಾವಸ್ತು. ‘ಸ್ಕೇರಿ ಫಾರೆಸ್ಟ್‌’ ಶೀರ್ಷಿಕೆಗೆ ಪ್ರೀತಿ- ಭಯ- ಆತ್ಮ ಎಂಬ ಅಡಿಬರಹವೂ ಇದೆ.

ಮೂಲತಃ ತುಮಕೂರಿನ ಮಾರಶೆಟ್ಟಿ ಹಳ್ಳಿಯವರಾದ ಉದ್ಯಮಿ ಜಯಪ್ರಭು ಆರ್ ಲಿಂಗಾಯತ್ (ಈಗ ಮುಂಬೈ ನಿವಾಸಿ) ಈ ಚಿತ್ರದ ನಿರ್ಮಾಪಕರು.

‘ನನಗೆ ಕನ್ನಡದ ಬಗ್ಗೆ ಅಪಾರ ಪ್ರೇಮ ಹಾಗೂ ವರನಟ ಡಾ.ರಾಜಕುಮಾರ್ ಅವರ ಅಪ್ಪಟ ಅಭಿಮಾನಿ. ಅವರ ಅಭಿನಯದ ಚಿತ್ರಗಳೇ ನನಗೆ ಚಿತ್ರ ನಿರ್ಮಾಣಕ್ಕೆ ಸ್ಫೂರ್ತಿ’ ಎನ್ನುತ್ತಾರೆ ಜಯಪ್ರಭು.

ಸ್ನೇಹಿತರೊಬ್ಬರು ಹಿಂದಿ ಚಿತ್ರ ನಿರ್ಮಾಣಕ್ಕೆ ಹಣ ಹೂಡಲು ಕೇಳಿದಾಗ ಕನ್ನಡದಲ್ಲಿಯೂ ನಿರ್ಮಾಣ ಮಾಡಿದರೆ ಮಾತ್ರ‌‌ ಹಣ ಹೂಡುವುದಾಗಿ ಹೇಳಿದ್ದಾರೆ ಜಯಪ್ರಭು. ಚಿತ್ರದ ತಾಂತ್ರಿಕ ವರ್ಗದಲ್ಲೂ ಹೆಚ್ಚಿನ ಪಾಲು ಕನ್ನಡಿಗರಿಗೆ ನೀಡಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಬಾಲಿವುಡ್ ನಲ್ಲಿ‌ ಅನುಭವ ಹೊಂದಿರುವ ಸಂಜಯ್ ಅಭೀರ್ ನಿರ್ದೇಶಿಸಿದ್ದಾರೆ.‌ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.

ಕನ್ನಡದ ಯುವ ಪ್ರತಿಭೆ ಆದಿ ಹಾಗೂ ಎಲ್.ಕೆ.ಲಕ್ಷ್ಮೀಕಾಂತ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ‌ಹಿನ್ನೆಲೆ ಸಂಗೀತ ಲಕ್ಷ್ಮೀಕಾಂತ್ ಅವರದು.

ಹಾಲಿವುಡ್ ನ ಜಂಗಲ್‌ಬುಕ್‌ 1994, ಹಿಂದಿಯ ರಾಗಿಣಿ ಎಂ.ಎಂ.ಎಸ್ 2 ಸೇರಿದಂತೆ ಮುಂತಾದ ಹೆಸರಾಂತ ಚಿತ್ರಗಳ ಛಾಯಾಗ್ರಾಹಕರಾದ ನರೇನ್ ಗೇಡಿಯಾ ಅವರ ಛಾಯಾಗ್ರಹಣ, ರಾಜೇಶ್ ಶಾ ಸಂಕಲನ ಹಾಗೂ‌ ದೀಪಕ್ ಶರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಕುತೂಹಲಕಾರಿ ಕಥೆಯೊಂದಿಗೆ ತ್ರಿಕೋನ ಲವ್ ಸ್ಟೋರಿ ಸಹ ಈ ಚಿತ್ರದಲ್ಲಿದೆ. ನಿರ್ಮಾಪಕ‌ ಜಯಪ್ರಭು ಸಹ‌ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದಾರೆ. ಜೀತ್ ರಾಯ್ದತ್ ಈ ಚಿತ್ರದ ಎರಡನೇ ನಾಯಕ. ಬಹುಭಾಷ ನಟ ಯಶ್ ಪಾಲ್ ಶರ್ಮ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಕೊಡಗಿನ‌ ಟೀನಾ ಪೊನ್ನಪ್ಪ, ಆಮ್‌ ರೀನ್, ಕಲ್ಪನಾ ಈ ಚಿತ್ರದ ನಾಯಕಿಯರು. ಅಷ್ಟೇ ಅಲ್ಲದೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ. ನಿರ್ಮಾಪಕರಪುತ್ರಿ ಬೇಬಿ ಪೂಜಾ ಸಹ ಈ‌ ಚಿತ್ರದ ಪ್ರಮುಖಪಾತ್ರದಲ್ಲಿ‌ ಅಭಿನಯಿಸಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಕಳೆದ ಡಿಸೆಂಬರ್‌ನಲ್ಲಿ ಚಿತ್ರೀಕರಣ ಆರಂಭವಾಗಿತ್ತು.‌ ಸಚಿವ ಮಾಧುಸ್ವಾಮಿ ಅವರು ಚಿತ್ರೀಕರಣಕ್ಕೆ ಚಾಲನೆ ನೀಡಿದ್ದರು. ಸಿದ್ದಗಂಗಾ ಮಠದ ಆವರಣ, ತುಮಕೂರು, ಚಿಕ್ಕಮಗಳೂರು ಹಾಗೂ ಮುಂಬೈನಲ್ಲಿ ಚಿತ್ರೀಕರಣ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT