ಯುವನಟ ಸಿದ್ದು ಮೂಲಿಮನಿ ನಾಯಕನಾಗಿ ನಟಿಸಿರುವ ‘ಸೀಟ್ ಎಡ್ಜ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಡಾರ್ಕ್ ಕಾಮಿಡಿಯ ಜೊತೆಗೆ ಹಾರರ್-ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬರುತ್ತಿರುವ ಚೇತನ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ರವೀಕ್ಷಾ ಶೆಟ್ಟಿ ನಾಯಕಿ.

‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಹಾಗೂ ‘ಕ್ರಿಟಿಕಲ್ ಕೀರ್ತನೆಗಳು’ ಮೊದಲಾದ ಚಿತ್ರಗಳಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವವಿದೆ. ನಿರ್ದೇಶಕನಾಗಿ ಇದು ನನ್ನ ಮೊದಲ ಸಿನಿಮಾ. ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಇತ್ತೀಚಿನ ದಿನಗಳಲ್ಲಿ ಯುಟ್ಯೂಬ್ ಮತ್ತು ಸೋಷಿಯಲ್ ಮೀಡಿಯಾಗಳಲ್ಲಿ ಅತಿಹೆಚ್ಚು ವೀವ್ಸ್ ಪಡೆಯಲು, ಜನಪ್ರಿಯರಾಗಲು ಯುಟ್ಯೂಬರ್ಸ್ ಮತ್ತು ವ್ಲಾಗರ್ಸ್ ಏನೇನು ಸಾಹಸಗಳನ್ನು ಮಾಡುತ್ತಾರೆ ಎಂಬ ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಇದು ಎಲ್ಲಾ ಥರದ ಪ್ರೇಕ್ಷಕರಿಗೂ ಕನೆಕ್ಟ್ ಆಗುವಂಥ ಸಿನಿಮಾ. ನಮಗೆ ಗೊತ್ತಿಲ್ಲದ ವಿಷಯದಲ್ಲಿ ದುಸ್ಸಾಹಸಕ್ಕೆ ಕೈಹಾಕಿದರೆ, ಏನೇನು ಆಗಬಹುದು ಎಂಬುದನ್ನು ಈ ಸಿನಿಮಾದಲ್ಲಿ ಹೇಳಿದ್ದೇವೆ’ ಎಂದರು ನಿರ್ದೇಶಕರು.

ರಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಕಿರಣ್, ಪುನೀತ್ ಬಾಬು, ತೇಜು ಪೊನ್ನಪ್ಪ, ಮನಮೋಹನ್ ರೈ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಎನ್.ಆರ್. ಸಿನಿಮಾ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ಗಿರಿಧರ ಟಿ.ವಸಂತಪುರ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

‘ಇದೊಂದು ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬಂದಿರುವ ಸಿನಿಮಾ. ನಾನೊಬ್ಬ ಯುಟ್ಯೂಬ್ ವ್ಲಾಗರ್ ಆಗಿ ಕಾಣಿಸಿಕೊಂಡಿದ್ದೇನೆ. ಯಾರೂ ಹೋಗದ ಭಯಾನಕ ಜಾಗವನ್ನು ಪ್ರೇಕ್ಷಕರಿಗೆ ಪರಿಚಯಿಸಬೇಕು ಎಂದು ಹಠಕ್ಕೆ ಬಿದ್ದ ನಾನು, ಘೋಸ್ಟ್ ಟೌನ್ಗೆ ಹೋಗಿ ಘೋಸ್ಟ್ ಹಂಟಿಂಗ್ ವಿಡಿಯೊ ಮಾಡಲು ನಿರ್ಧರಿಸುತ್ತೇನೆ. ಕೊನೆಗೆ ನಾನು ಅಂದುಕೊಂಡಂತೆ ಘೋಸ್ಟ್ ಹಂಟಿಂಗ್ ವಿಡಿಯೊ ಮಾಡಿ ಪ್ರೇಕ್ಷಕರಿಗೆ ತೋರಿಸುತ್ತೇನಾ..? ಇಲ್ಲವಾ..? ಎಂಬುದೇ ಕಥೆ’ ಎಂದರು ಸಿದ್ದು.

‘ನಾನು ಈ ಸಿನಿಮಾದಲ್ಲಿ ಮಧ್ಯಮ ವರ್ಗದ ಕಾಲೇಜು ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಘೋಸ್ಟ್ ಹಂಟಿಂಗ್ಗೆ ಹೋಗುವ ಯುಟ್ಯೂಬರ್ ಜೊತೆಗೆ ನಾನು ಕೂಡ ತೊಂದರೆಗೆ ಸಿಲುಕಿಕೊಳ್ಳುತ್ತೇನೆ. ಎರಡು ಶೇಡ್ಗಳಿರುವಂಥ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ’ ಎಂದರು ರವೀಕ್ಷಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.