ಸಿದ್ದು ಮೂಲಿಮನಿ ಅಭಿನಯದ ‘ಸೀಟ್ ಎಡ್ಜ್’ ಚಿತ್ರದ ‘ಅಂಗೋ ಇಂಗೋ…’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಯುವ ನಿರ್ದೇಶಕ ಚೇತನ್ ಶೆಟ್ಟಿ ನಿರ್ದೇಶನವಿದೆ. ಇವರು ಈ ಹಿಂದೆ ಕೆಲ ಚಿತ್ರಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

ಲಕ್ಷ್ಮಿ ರಮೇಶ್ ಸಾಹಿತ್ಯವಿರುವ ಈ ಹಾಡಿಗೆ ಗಾಯಕ ಟಿಪ್ಪು ದನಿಯಾಗಿದ್ದಾರೆ. ‘ಡಾರ್ಕ್ ಕಾಮಿಡಿ ಜತೆಗೆ ಹಾರರ್-ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ. ಯೂಟ್ಯೂಬ್ ವ್ಲಾಗರ್ ಆಗಿರುವ ಹುಡುಗನೊಬ್ಬನ ಘೋಸ್ಟ್ ಹಂಟಿಂಗ್ ಸಾಹಸ ಮಾಡುತ್ತಾನೆ. ಅದರಲ್ಲಿ ಆತ ಏನೇನು ಸಮಸ್ಯೆಗಳನ್ನು ಎದುರಿಸುತ್ತಾನೆ ಎಂಬುದೇ ಚಿತ್ರಕಥೆ. ಬೆಂಗಳೂರು, ಮೈಸೂರು, ಶಿವಮೊಗ್ಗ ಸುತ್ತಮುತ್ತ 45 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಶೀಘ್ರದಲ್ಲಿಯೇ ಚಿತ್ರ ತೆರೆಗೆ ಬರಲಿದೆ’ ಎಂದಿದೆ ಚಿತ್ರತಂಡ.

ಎನ್.ಆರ್.ಸಿನಿಮಾ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ಗಿರಿಧರ ಟಿ. ವಸಂತಪುರ ಮತ್ತು ಸುಜಾತ ಗಿರಿಧರ ಬಂಡವಾಳ ಹೂಡಿದ್ದಾರೆ. ‘ಅಜ್ಞಾತವಾಸಿ’ ಚಿತ್ರದಲ್ಲಿ ಗಮನ ಸೆಳೆದಿದ್ದ ಸಿದ್ದು ಮೂಲಿಮನಿ ಪೂರ್ಣಪ್ರಮಾಣದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಯುವ ನಟಿ ರವೀಕ್ಷಾ ಶೆಟ್ಟಿ ನಾಯಕಿಯಾಗಿ ಜೋಡಿಯಾಗಿದ್ದಾರೆ. ಉಳಿದಂತೆ ರಾಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಹಾಡುಗಳಿಗೆ ಆಕಾಶ್ ಪರ್ವ ಸಂಗೀತ ಸಂಯೋಜಿಸಿದ್ದು, ಕೆಲದಿನಗಳ ಹಿಂದಷ್ಟೇ ಈ ಚಿತ್ರದ ಮೊದಲ ಹಾಡು ‘ಸಾರಿ ಹೇಳುವೆ ಜಗಕ್ಕೆ…’ ಬಿಡುಗಡೆಯಾಗಿತ್ತು. ಸಿದ್ದು ಕೊಡಿಪುರ ಸಾಹಿತ್ಯದ ರೋಮ್ಯಾಂಟಿಕ್ ಗೀತೆಯನ್ನು ಅರ್ಮನ್ ಮಲ್ಲಿಕ್ ಹಾಡಿದ್ದರು.

ಚಿತ್ರಕ್ಕೆ ದೀಪಕ್ ಕುಮಾರ್ ಜೆ.ಕೆ ಛಾಯಾಚಿತ್ರಗ್ರಹಣ, ನಾಗೇಂದ್ರ ಉಜ್ಜನಿ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.