ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ 'ಶಂಭೋ ಶಿವ ಶಂಕರ' ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

ಸುಪ್ರೀಂ ಹೀರೋ ಶಶಿಕುಮಾರ್, ನಾಯಕರಾದ ಅಭಯ್ ಪುನೀತ್, ರೋಹಿತ್, ರಕ್ಷಕ್, ನಾಯಕಿ ಸೊನಾಲ್ ಮಾಂಟೆರೊ, ಜೋಗಿ ನಾಗರಾಜ್, ಪ್ರದೀಪ್ ಟಿಪ್ಟೂರ್, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.

ಮಾಸಾಂತ್ಯಕ್ಕೆ ಹಾಡಿನ ಚಿತ್ರೀಕರಣ ನಡೆಯಲಿದೆ. ಅದಕ್ಕಾಗಿ ಅದ್ದೂರಿ ಸೆಟ್ ನಿರ್ಮಾಣವಾಗುತ್ತಿದೆ ಶಂಕರ್ ಕೋನಮಾನಹಳ್ಳಿ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಕಿರುತೆರೆಯಲ್ಲಿ ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸಿರುವ ಶಂಕರ್ ಕೋನಮಾನಹಳ್ಳಿ ಅವರಿಗೆ ಬೆಳ್ಳಿತೆರೆಯಲ್ಲಿ ಇದು ಮೊದಲ ಚಿತ್ರ.

ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರದ್ದೇ. ಗೌಸ್ ಫೀರ್ ಹಾಗೂ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೇ ಸಂಗೀತ ನೀಡುತ್ತಿದ್ದಾರೆ. ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.

'ಶಂಭೋ ಶಿವ ಶಂಕರ' ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.