ಪೆನ್ಸಿಲ್ ಕುರಿತಾದ ಕಥೆಯನ್ನು ಹೊಂದಿರುವ ‘ಸೀಸ್ ಕಡ್ಡಿ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ರತನ್ ಗಂಗಾಧರ್ ನಿರ್ದೇಶನದ ಚಿತ್ರವಿದು. ಹೊಸ ನಿರ್ದೇಶಕರುಗಳು ಈ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದ್ದು ವಿಶೇಷವಾಗಿತ್ತು.

‘ಪುಸ್ತಕವೊಂದನ್ನು ಓದಿದಾಗ ಅದರಲ್ಲಿ ಪೆನ್ಸಿಲ್ನ ನಾನಾ ಸೂಕ್ಷ್ಮಗಳ ವಿವರಗಳಿತ್ತು. ಅದನ್ನು ಐದು ಪಾತ್ರಗಳನ್ನಾಗಿಸಿ, ಅದಕ್ಕೆ ಹೊಂದಿಕೊಂಡಂತೆ ಐದು ಕಥೆಗಳನ್ನು ಸೃಷ್ಟಿಸಿ, ಆ ಕಥೆಗಳೆಲ್ಲ ಒಂದು ಬಿಂದುವಿನಲ್ಲಿ ಸಂಧಿಸುವಂತೆ ಕಥೆ ಹೆಣೆಯಲಾಗಿದೆ. ಈ ಚಿತ್ರದಲ್ಲಿ ಬೆಂಗಳೂರು ಕನ್ನಡ, ಹವಿಗನ್ನಡ, ತುಮಕೂರು ಭಾಗದ ಹಳ್ಳಿಗಾಡಿನ ಕನ್ನಡ ಹಾಗೂ ಮೈಸೂರು ಸೀಮೆಯ ಕನ್ನಡ ಬಳಸಲಾಗಿದೆ. ಒಟ್ಟಾರೆ ಚಿತ್ರ ಪ್ರೇಕ್ಷಕರಿಗೆ ಹೊಸ ಅನುಭೂತಿ ನೀಡಲಿದೆ ಎಂಬ ನಂಬಿಕೆಯಿದೆ’ ಎಂದರು ನಿರ್ದೇಶಕರು.

ಗ್ರಹಣ ಪ್ರೊಡಕ್ಷನ್ ಮೂಲಕ ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

‘ಮಕ್ಕಳ ಮುಗ್ಧತೆಯನ್ನು ನೈಜವಾಗಿ ಸೆರೆಹಿಡಿಯಲಾಗಿದೆ. ಟ್ರೇಲರ್ ನೋಡಿದರೆ ಸಿನಿಮಾ ಭರವಸೆ ಮೂಡಿಸುತ್ತಿದೆ. ಈ ಸಿನಿಮಾ ಗೆಲ್ಲಬೇಕು. ಚಿತ್ರಮಂದಿರಗಳಲ್ಲಿಯೇ ಇಂಥ ಸಿನಿಮಾಗಳು ಗೆಲ್ಲಬೇಕು. ಆಗ ಹೊಸತಂಡಗಳಿಗೆ ಇನ್ನಷ್ಟು ಚಿತ್ರ ಮಾಡಲು ಸ್ಫೂರ್ತಿ ಬರುತ್ತದೆ’ ಎಂದರು ‘ಘೋಸ್ಟ್’ ಖ್ಯಾತಿಯ ನಿರ್ದೇಶಕ ಶ್ರೀನಿ.

ಈ ಚಿತ್ರಕ್ಕೆ ಸುನಿಲ್ ನರಸಿಂಹಮೂರ್ತಿ ಛಾಯಾಚಿತ್ರಗ್ರಹಣ, ಕೆ.ಸಿ ಬಾಲಸಾರಂಗನ್ ಸಂಗೀತ ನಿರ್ದೇಶನ, ಅನಿರುದ್ಧ್ ಹರ್ಷವರ್ಧನ್ ಸಂಕಲನವಿದೆ. ಸಿತಿನ್ ಅಪ್ಪಯ್ಯ, ಬಿ.ಎಸ್. ರಾಮಮೂರ್ತಿ, ಮಾನ್ವಿ ಬಳಗಾರ್, ನೊಣವಿನಕೆರೆ ರಾಮಕೃಷ್ಣಯ್ಯ ಮುಂತಾದವರ ತಾರಾಗಣವಿರುವ ಈ ಚಿತ್ರ ಜೂನ್ 6ರಂದು ತೆರೆ ಕಾಣಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.