ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಅಭಿನಯಿಸುತ್ತಿರುವ ತೆಲುಗಿನ ‘ಶಾಕುಂತಲಂ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.
ಯುಟ್ಯೂಬ್‌ನಲ್ಲಿ ಟ್ರೇಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.
ಮಹಾಕವಿ ಕಾಳಿದಾಸನ ಕೃತಿ ಆಧರಿಸಿ ಈ ಸಿನಿಮಾ ಬರುತ್ತಿದ್ದು ಚಿತ್ರದಲ್ಲಿ ಸಮಂತಾ ಶಕುಂತಲೆಯಾಗಿ ಮಿಂಚಿದ್ದಾರೆ. ಟ್ರೇಲರ್ ಅನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ‘ಶಾಕುಂತಲಂ’ ಚಿತ್ರದ ಬಗ್ಗೆ ಸಮಂತಾ ಅಭಿಮಾನಿಗಳು ವಿಶೇಷವಾದ ನಿರೀಕ್ಷೆ ಇಟ್ಟುಕೊಂಡಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ‘ಶಾಕುಂತಲಂ’ ಟ್ರೇಲರ್ ಅನ್ನು ಹೆಚ್ಚು ಶೇರ್ ಮಾಡುತ್ತಿದ್ದಾರೆ.
ಶ್ವೇತವರ್ಣದ ಸೀರೆಯಲ್ಲಿ, ಪ್ರಾಣಿ, ಪಕ್ಷಿಗಳೊಂದಿಗೆ ಸುಂದರವಾದ ಪರಿಸರದಲ್ಲಿ ಸಮಂತಾ ಮನಮೋಹಕವಾಗಿ ಕಾಣಿಸಿಕೊಂಡಿದ್ದಾರೆ.
ಪೌರಾಣಿಕ ಕಥಾಹಂದರ ಇರುವ ಈ ಚಿತ್ರವನ್ನು ಗುಣಶೇಖರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ನೀಲಿಮಾ ಗುಣ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ, ಹಿಂದಿ, ಮಲಯಾಳಂ, ತಮಿಳು ಹಾಗೂ ತೆಲುಗಿನಲ್ಲಿ ಈ ಸಿನಿಮಾ ಮೂಡಿಬರಲಿದೆ.
ಫೆಬ್ರವರಿ 17 ರಂದು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದ್ದು, 3ಡಿಯಲ್ಲಿ ಮೂಡಿಬರಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.