ವಿನೋದ್ ಪ್ರಭಾಕರ್ ಅಭಿನಯ ‘ಶ್ಯಾಡೋ’ ಈ ವಾರ ತೆರೆಗೆ

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ ‘ಶ್ಯಾಡೋ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ರವಿ ಗೌಡ ನಿರ್ದೇಶನದ ಈ ಚಿತ್ರಕ್ಕೆ ಅಚ್ಚು ಸಂಗೀತ ನೀಡಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಛೋಟಾ ಕೆ. ಪ್ರಸಾದ್ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿದೆ. ಶ್ರೀಕನಕದುರ್ಗ ಚಲನಚಿತ್ರ ಲಾಂಛನದಲ್ಲಿ ಚಕ್ರವರ್ತಿ ಸಿ.ಎಚ್. ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಶೋಭಿತಾ ರಾಣಾ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಶ್ರೀಗಿರಿ, ಶ್ರವಣ್, ಗಿರಿಶ್ಯಾಮ್, ಸತ್ಯದೇವ್, ಸಿರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.