ಶುಕ್ರವಾರ, ಡಿಸೆಂಬರ್ 3, 2021
20 °C

ನಟ ಶಾರುಖ್‌ ಖಾನ್‌ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿಲ್ಲ: ಎನ್‌ಸಿಬಿ ಸ್ಪಷ್ಟನೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಮುಂಬೈ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟ ಶಾರುಖ್‌ ಖಾನ್‌ ಮನೆಯಲ್ಲಿ ಯಾವುದೇ ರೀತಿಯ ಶೋಧ ಕಾರ್ಯಾಚರಣೆ ನಡೆಸಿಲ್ಲ ಎಂದು ಎನ್‌ಸಿಬಿ ಗುರುವಾರ ಸ್ಪಷ್ಟಪಡಿಸಿದೆ.

ಮುಂಬೈನಲ್ಲಿರುವ ಶಾರುಖ್‌ ನಿವಾಸ 'ಮನ್ನತ್‌'ನಲ್ಲಿ ಎನ್‌ಸಿಬಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಎನ್‌ಸಿಬಿ, 'ಶಾರುಖ್‌ ನಿವಾಸದಲ್ಲಿ ಯಾವುದೇ ಶೋಧ ಕಾರ್ಯಾಚರಣೆ ಕೈಗೊಂಡಿಲ್ಲ' ಎಂದು ತಿಳಿಸಿದೆ.

'ಆರ್ಯನ್ ಖಾನ್‌ಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಸಂಗ್ರಹಿಸಲು ಎನ್‌ಸಿಬಿ ತಂಡ ಶಾರುಖ್‌ ಖಾನ್ ನಿವಾಸಕ್ಕೆ ಭೇಟಿ ನೀಡಿದೆ' ಎಂದು ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ತಿಳಿಸಿದ್ದಾರೆ.

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಆರ್ಯನ್ ಖಾನ್ ಅಕ್ಟೋಬರ್ 2ರಿಂದ ಜೈಲಿನಲ್ಲಿದ್ದಾರೆ.

ಆರ್ಯನ್‌ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು