ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡುಗಡೆಗೂ ಮುನ್ನ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟು ಹಾಕಿದ ಜವಾನ್‌ ಚಿತ್ರ

Published 5 ಸೆಪ್ಟೆಂಬರ್ 2023, 6:36 IST
Last Updated 5 ಸೆಪ್ಟೆಂಬರ್ 2023, 6:36 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ 'ಜವಾನ್' ಚಿತ್ರ ಬಿಡುಗಡೆಗೆ ಕೌಂಟ್‌ಡೌನ್‌ ಶುರುವಾಗಿದೆ. ಅವರ (ಶಾರುಖ್‌) ಅಭಿಮಾನಿಗಳು ನೆಚ್ಚಿನ ನಟನನ್ನು ತೆರೆ ಮೇಲೆ ಕಾಣಲು ಮುಂಗಡವಾಗಿ 6 ಲಕ್ಷ ಟಿಕೆಟ್‌ಗಳನ್ನು ಖರೀದಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪೋಸ್ಟರ್‌ಗಳನ್ನು ಹಂಚಿಕೊಂಡು ಜವಾನ್‌ ಫಸ್ಟ್ ಡೇ ಫಸ್ಟ್ ಶೋ ಎಂಬ ಹ್ಯಾಶ್‌ ಟ್ಯಾಗ್‌ಗಳನ್ನು ಬಳಸಿ ಟ್ವೀಟ್‌ ಮಾಡುತ್ತಿರುವುದು ಇದೀಗ ಎಕ್ಸ್‌ನಲ್ಲಿ(ಟ್ವಿಟರ್‌) ಟ್ರೆಂಡ್‌ ಆಗಿದೆ.

ಜವಾನ್‌ ಚಿತ್ರದ 6 ಲಕ್ಷದ ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿದ್ದು, ಬರೋಬ್ಬರಿ ಸುಮಾರು ₹17 ಕೋಟಿ ಬಾಕ್ಸ್‌ ಆಫೀಸ್‌ನಲ್ಲಿ ಕಲೆಕ್ಷನ್‌ ಆಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಚಿತ್ರದಲ್ಲಿ ನಯನತಾರಾ, ವಿಜಯ್ ಸೇತುಪತಿ, ಪ್ರಿಯಮಣಿ, ಸಾನ್ಯಾ ಮಲ್ಹೋತ್ರಾ, ಸುನಿಲ್ ಗ್ರೋವರ್ ಮುಂತಾದ ತಾರಾಗಣವಿದೆ.

ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್‘ ಅನ್ನು ನಿರ್ದೇಶಕ ಅಟ್ಲೀ ನಿರ್ದೇಶನ ಮಾಡಿದ್ದು, ಗೌರಿ ಖಾನ್‌ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವು ಥ್ರಿಲ್ಲರ್‌ ಕಥಾಹಂದರವನ್ನು ಹೊಂದಿದೆ.

‘ಜವಾನ್‘ ಚಿತ್ರವು ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಸೆಪ್ಟೆಂಬರ್ 7 ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT