ಎರಡು ದಿನಗಳ ಹಿಂದಷ್ಟೇ ಜಮ್ಮುವಿನ ರೆಯಾಸಿ ಜಿಲ್ಲೆಯಲ್ಲಿರುವ ವೈಷ್ಣೋದೇವಿ ದೇಗುಲಕ್ಕೂ ಶಾರುಕ್ ಭೇಟಿ ನೀಡಿದ್ದರು.
ಜವಾನ್ ಚಿತ್ರ ಬಿಡುಗಡೆ ಸಂದರ್ಭದಲ್ಲಿ ಅವರು ತಿರುಪತಿಗೆ ಭೇಟಿ ನೀಡಿದ್ದರು.
ಶಾರುಕ್ ಅಭಿನಯದ ‘ಡುಂಕಿ’ ಚಿತ್ರ ಡಿ.21ರಂದು ಬಿಡುಗಡೆಯಾಗಲಿದೆ. ಇದು 2023ರಲ್ಲಿ ಬಿಡುಗಡೆಯಾಗುತ್ತಿರುವ ಅವರ ಮೂರನೇ ಚಿತ್ರ. ಈ ಹಿಂದೆ ‘ಪಠಾಣ್’ ಹಾಗೂ ‘ಜವಾನ್’ ಚಿತ್ರ ಬಿಡುಗಡೆಯಾಗಿತ್ತು. ಎರಡೂ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದವು.
ಅವರ ಪುತ್ರಿ ಸುಹಾನಾ ಕೂಡ ಇತ್ತೀಚೆಗೆ ನೆಟ್‌ಫ್ಲಿಕ್ಸ್ ಸಿನಿಮಾದ ‘ದಿ ಆರ್ಚೀಸ್’ನಲ್ಲಿ ಬಣ್ಣ ಹಚ್ಚಿದ್ದರು. ಆ ಮೂಲಕ ನಟನೆಗೆ ಪದಾರ್ಪಣೆ ಮಾಡಿದ್ದರು.