ಮಂಗಳವಾರ, ಮಾರ್ಚ್ 21, 2023
20 °C

ಶಕಲಕ ಬೂಮ್ ಬೂಮ್ ತೆರೆಗೆ 20ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ತುಳುನಾಡಿನಾದ್ಯಂತ ಜ.20ರಂದು ಶಕಲಕ ಬೂಮ್ ಬೂಮ್ ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರದ ನಿರ್ಮಾಪಕ ನಿತ್ಯಾನಂದ ನಾಯಕ್ ನರಸಿಂಗೆ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯುಎನ್‌ ಸಿನಿಮಾಸ್ ಬ್ಯಾನರ್ ಅಡಿ ಕಾಮಿಡಿ, ಸಸ್ಪೆನ್ಸ್‌, ಥ್ರಿಲ್ಲರ್ ಸಿನಿಮಾ ನಿರ್ಮಾಣ ಮಾಡಲಾಗಿದೆ. ಚಿತ್ರದಲ್ಲಿ ಅರವಿಂದ್ ಬೋಳಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕನಾಗಿ ಗಾಡ್ವಿನ್ ಸ್ಪಾರ್ಕಲ್, ನಾಯಕಿಯಾಗಿ ಲಕ್ಷಾ ಶೆಟ್ಟಿ ಅಭಿನಯಿಸಿದ್ದಾರೆ.

ರೂಪಶ್ರೀ ವರ್ಕಾಡಿ, ಮನೋಹರ್ ಶೆಟ್ಟಿ ನಂದಳಿಕೆ, ವಸಂತ್ ಮುನಿಯಾಲ್, ಹರೀಶ್ ಗಾಳಿಪಟ, ಸುನಿಲ್ ಕಡ್ತಲ, ಯತೀಶ್ ಪೂಜಾರಿ, ಯಶವಂತ್, ಪ್ರವೀಣ್ ಆಚಾರ್ಯ, ಉಮೇಶ್ ಮಿಜಾರ್, ಪ್ರವೀಣ್ ಮಾರ್ಕಮೆ, ರಾಧೇಶ್‌, ರಾಜೇಶ್ ದಾನಶಾಲೆ, ಲಂಚುಲಾಲ್, ರಾಜೇಶ್ವರಿ ಕುಲಾಲ್, ಧೀರಜ್, ಶಿವಾನಂದ್, ಮಿಮಿಕ್ರಿ ಶರಣ, ಯಜ್ಞೇಶ್ ಶೆಟ್ಟಿ ಅಭಿನಯಿಸಿದ್ದಾರೆ. ₹ 1 ಕೋಟಿ ವೆಚ್ಚದಲ್ಲಿ ಚಿತ್ರ ನಿರ್ಮಿಸಿದ್ದು ಹೊಸತನದಿಂದ ಕೂಡಿದೆ ಎಂದರು.

ಸಿನಿಮಾದಲ್ಲಿ ನಟಿಸಿರುವ ಎಲ್ಲರೂ ಅಂಗಾಂಗ ದಾನ ಮಾಡುವ ಸಂಕಲ್ಪ ತೆಗೆದುಕೊಂಡಿದ್ದು ಚಿತ್ರದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಮಾಡಲಾಗಿದೆ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು