ಹೈದರಾಬಾದ್: ಟಾಲಿವುಡ್ ಬ್ಯೂಟಿ ಸಮಂತಾ ರುತ್ ಪ್ರಭು ಅಭಿನಯಿಸಿರುವ ಚಿತ್ರ ’ಶಾಕುಂತಲಂ’ನ ಬಿಡುಗಡೆ ದಿನಾಂಕ ಬದಲಾವಣೆಗೊಂಡಿದೆ. ಈ ಕುರಿತು ಚಿತ್ರತಂಡ ಇನ್‌ಸ್ಟಾಗ್ರಾಮ್ ಮೂಲಕ ಮಾಹಿತಿ ಹಂಚಿಕೊಂಡಿದೆ.
ಈ ಹಿಂದೆ ಇದೇ ಫೆಬ್ರುವರಿ 17ರಂದು ’ಶಾಕುಂತಲಂ’ ಸಿನಿಮಾ ತೆರೆ ಮೇಲೆ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಚಿತ್ರತಂಡ ಏಪ್ರಿಲ್ 14ರಂದು ‘ಶಾಕುಂತಲಂ’ ಚಿತ್ರ ವಿಶ್ವದಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.
ಶಾಕುಂತಲಂ ಸಿನಿಮಾದ ಚಿತ್ರಗಳನ್ನು ಆಗಾಗ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ ಸಿನಿಮಾ ಕುರಿತ ಅಪ್‌ಡೇಟ್‌ಗಳನ್ನು ತಮ್ಮ ಅಭಿಮಾನಿಗಳಿಗೆ ಸಮಂತಾ ನೀಡುತ್ತಿರುತ್ತಾರೆ.
ಪೌರಾಣಿಕ ಹಿನ್ನಲೆ ಹೊಂದಿರುವ ಶಾಕುಂತಲಂ ಚಿತ್ರದಲ್ಲಿ ನಟಿಸಿರುವ ಸಮಂತಾ, ಶ್ವೇತವರ್ಣದ ಉಡುಗೆಯಲ್ಲಿ ಮಿಂಚುತ್ತಿದ್ದಾರೆ. ಈ ಹಿಂದಿನ ಪೋಟೊಗಳಲ್ಲಿ ನಟಿ ಹೂವಿನ ಆಭರಣಗಳನ್ನು ಧರಿಸಿ ಕಾಣಿಸಿಕೊಂಡಿದ್ದಾರೆ.
ಇವನ್ನೂ ಓದಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.