ಶುರುವಾಗಿದೆ ‘ಶಂಭೋ ಶಿವ ಶಂಕರ’ನ ಮಾತು

ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ ‘ಶಂಭೋ ಶಿವ ಶಂಕರ’ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.
ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡು ಹಾಗೂ ಸಾಹಸ ಸನ್ನಿವೇಶ ಚಿತ್ರೀಕರಣ ಬಾಕಿಯಿದೆ. ಶಂಕರ್ ಕೋನಮಾನಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರದ್ದು. ಗೌಸ್‌ಪೀರ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಸಂಗೀತ ನೀಡುತ್ತಿದ್ದಾರೆ.
ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನವಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.