ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ ‘ಶಂಭೋ ಶಿವ ಶಂಕರ’ ಚಿತ್ರದ ಹಾಡಿನ ಚಿತ್ರೀಕರಣ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ನಡೆದಿದೆ.

ಗೌಸ್ ಫಿರ್ ಬರೆದಿರುವ ‘ನಾಟಿಕೋಳಿನಲ್ಲಿ ಮೂಳೆ ಸರಕನೇ ಎಳಿತ್ತಾಳೆ' ಎಂಬ ಹಾಡಿಗೆ ನಾಯಕರಾದ ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಅವರು ರಾಜಸ್ಥಾನದ ಬೆಡಗಿ ಕಿರಣ್ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ. ಕಲೈ ಅವರು ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಇದು ಚಿತ್ರದಲ್ಲಿ ನಾಯಕರನ್ನು ಪರಿಚಯಿಸುವ ಗೀತೆಯೂ ಹೌದು.

ಇನ್ನೆರಡು ಸಾಹಸ ಸನ್ನಿವೇಶಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ.
ಶಂಕರ್ ಕೋನಮಾನಹಳ್ಳಿ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆ, ಸಂಭಾಷಣೆ ಕೂಡಾ ಅವರದ್ದೇ.
ಗೌಸ್‌ಪೀರ್ ಹಾಗೂ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರು ಸಂಗೀತ ನೀಡುತ್ತಿದ್ದಾರೆ.

ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.

‘ಶಂಭೋ ಶಿವ ಶಂಕರ’ ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ. ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮೊಂತೇರೋ, ಜೋಗಿ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.