ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಛೂ ಮಂತರ್’ ಹೇಳ್ತಿದ್ದಾರೆ ಶರಣ್‌

Last Updated 20 ಡಿಸೆಂಬರ್ 2022, 9:59 IST
ಅಕ್ಷರ ಗಾತ್ರ

ನಟ ಶರಣ್ ‘ಛೂ ಮಂತರ್’ ಚಿತ್ರದ ನಾಯಕರಾಗಿದ್ದಾರೆ. ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖ ಪಾತ್ರದಲ್ಲಿದ್ದಾರೆ.

ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್‌ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದು ಈ ಸಂಸ್ಥೆಯ ನಿರ್ಮಾಣದ ಐದನೇ ಚಿತ್ರ.

ನವನೀತ್ ಅವರು ಕಥೆ, ಚಿತ್ರಕಥೆ ಬರೆದು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಹಾರರ್‌, ಕಾಮಿಡಿ ಕಥಾಹಂದರ ಈ ಚಿತ್ರದ್ದು. ಚಿತ್ರದ ಡಬ್ಬಿಂಗ್‌ ಮುಗಿದಿದೆ.

ಬೆಂಗಳೂರು, ಮೈಸೂರು, ಉತ್ತರಕಾಂಡ ಹಾಗೂ ಲಂಡನ್‌ನಲ್ಲಿ ಚಿತ್ರೀಕರಣ ನಡೆದಿದೆ.

ಅನೂಪ್ ಕಟ್ಟುಕರನ್ ಛಾಯಾಗ್ರಾಹಕರು. ವೆಂಕಿ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್ (ಕೆ.ಜಿ.ಎಫ್. ಖ್ಯಾತಿ) ಹಾಗೂ ಮೋಹನ್ ಬಿ. ಕೆರೆ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT