ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದೆ ಹೋದ ‘ಛೂ ಮಂತರ್’

Published 8 ಮೇ 2024, 22:32 IST
Last Updated 8 ಮೇ 2024, 22:32 IST
ಅಕ್ಷರ ಗಾತ್ರ

ಶರಣ್ ಅಭಿನಯದ ‘ಛೂ ಮಂತರ್’ ಮೇ 10ಕ್ಕೆ ತೆರೆಗೆ ಬರಬೇಕಿತ್ತು. ಚುನಾವಣೆ, ಐಪಿಎಲ್‌ ಕಾವು ಕಡಿಮೆಯಾಗದೇ ಇರುವುದರಿಂದ ಚಿತ್ರ ಬಿಡುಗಡೆ ಸ್ವಲ್ಪ ವಿಳಂಬವಾಗಲಿದೆ ಎಂದು ಚಿತ್ರತಂಡ ಹೇಳಿದೆ.   

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ ಚಿತ್ರಕ್ಕೆ ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶನವಿದೆ.

‘ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಸರಿಯಾದ ಸಮಯ ನೋಡಿಕೊಂಡು ಚಿತ್ರ ಬಿಡುಗಡೆ ಮಾಡುವಂತೆ ಸಲಹೆ ನೀಡಿದ್ದಾರೆ. ಇದೊಂದು ವಿಭಿನ್ನ  ಹಾರಾರ್ ಚಿತ್ರವಾಗಿದ್ದು, ಎಲ್ಲಾ ಭಾಷೆಗಳ ಜನರು ನೋಡುವ ಕಥಾಹಂದರವನ್ನು ಹೊಂದಿದೆ. ಈಗ ದೇಶಾದ್ಯಂತ ಚುನಾವಣೆ ಕೂಡ ನಡೆಯುತ್ತಿದೆ. ಹಾಗಾಗಿ,  ನಮ್ಮ ಚಿತ್ರವನ್ನು ಮೇ 10 ರಂದು ಬಿಡುಗಡೆ ಮಾಡುತ್ತಿಲ್ಲ. ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸುತ್ತವೆ’ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದ್ದಾರೆ‌.

ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಚಿತ್ರಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT