ಬುಧವಾರ, ಸೆಪ್ಟೆಂಬರ್ 22, 2021
23 °C

ನಟಿ ಶರ್ಮಿಳಾ ಮಾಂಡ್ರೆಗೆ ಕೋವಿಡ್‌–19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶರ್ಮಿಳಾ ಮಾಂಡ್ರೆ

ನಟಿ ಶರ್ಮಿಳಾ ಮಾಂಡ್ರೆ ಸೇರಿದಂತೆ ಅವರ ಕುಟುಂಬದ ಸದಸ್ಯರಿಗೆ ಕೋವಿಡ್‌–19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಅವರೇ ಟ್ವಿಟರ್‌ನಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

‘ನಾನು ಮತ್ತು ನನ್ನ ಕುಟುಂಬದ ಸದಸ್ಯರಿಗೆ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದೆ. ಹಾಗಾಗಿ, ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದೇವೆ. ನಾನು ಪ್ರತ್ಯೇಕವಾಗಿ ಮನೆಯಲ್ಲಿಯೇ ಇದ್ದೇನೆ. ವೈದ್ಯರ ಸೂಚನೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

ಶರ್ಮಿಳಾ ಕನ್ನಡ ಚಿತ್ರರಂಗ ಪ್ರವೇಶಿಸಿದ್ದು ‘ಸಜನಿ’ ಚಿತ್ರದ ಮೂಲಕ. ಅವರು ಬಣ್ಣದಲೋಕ ಪ್ರವೇಶಿಸಿ ಒಂದು ದಶಕ ಉರುಳಿದೆ. ಕಳೆದ ಮೂರು ವರ್ಷದಿಂದಲೂ ಆಕೆ ಯಾವುದೇ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ ಈಗ ಯೋಗರಾಜ್‌ ಭಟ್‌ ನಿರ್ದೇಶನದ ‘ಗಾಳಿಪಟ 2’ ಮತ್ತು ‘ದಸರಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು