ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಪ್ರಧಾನ ಚಿತ್ರ ‘ಶೀಲ’

Published 2 ಆಗಸ್ಟ್ 2023, 0:01 IST
Last Updated 2 ಆಗಸ್ಟ್ 2023, 0:01 IST
ಅಕ್ಷರ ಗಾತ್ರ

ನಟಿ ರಾಗಿಣಿ ದ್ವಿವೇದಿ ನಟನೆಯ ಶೀಲ ಸಿನಿಮಾ ಆಗಸ್ಟ್‌ 4ರಂದು ಬಿಡುಗಡೆಯಾಗಲಿದೆ. ನಟಿ ಪ್ರಿಯಾಂಕಾ ಉಪೇಂದ್ರ ಇತ್ತೀಚೆಗೆ ಸಿನಿಮಾದ ಟ್ರೈಲರ್‌ ಬಿಡುಗಡೆಗೊಳಿಸಿದರು.

ಈ ಸಿನಿಮಾ ಕನ್ನಡ ಹಾಗೂ ಮಲಯಾಳಂನಲ್ಲಿ ನಿರ್ಮಾಣವಾಗಿದೆ. ಮಲಯಾಳಂನಲ್ಲಿ ಈಗಾಗಲೇ ಸಿನಿಮಾ ಬಿಡುಗಡೆಯಾಗಿದೆ. ‘ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಹೆಣ್ಣುಮಕ್ಕಳು ದಿನನಿತ್ಯ ಸಮಾಜದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ. ಹೆಣ್ಣು ಮನಸ್ಸು ಮಾಡಿದರೆ, ತನಗೆದುರಾಗುವ ಸಮಸ್ಯೆಯನ್ನು ತಾನೇ ಹೇಗೆ ಬಗೆಹರಿಸಿಕೊಳ್ಳಬಹುದು‌ ಎಂಬುದನ್ನು ಕೂಡ ಈ ಚಿತ್ರದಲ್ಲಿ ತೋರಿಸಿದ್ದೇವೆ. ಆಗಸ್ಟ್ 4 ರಂದು ಚಿತ್ರವು ರಾಜ್ಯದ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ’ ಎಂದರು ರಾಗಿಣಿ. 

ಚಿತ್ರಕ್ಕೆ ಬಾಲು ನಾರಾಯಣನ್ ಆ್ಯಕ್ಷನ್‌ ಕಟ್‌ ಹೇಳಿದ್ದು, ಕೇರಳ ಹಾಗೂ ಬೆಂಗಳೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ಚಿತ್ರದ ತಾರಾಬಳಗದಲ್ಲಿ ರಾಗಿಣಿ ದ್ವಿವೇದಿ, ಅವಿನಾಶ್, ಶೋಭರಾಜ್, ಚಿತ್ರಾ ಶೆಣೈ, ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT