ಮುಂಬೈ: ರಾಜ್ ಕುಂದ್ರಾ ನನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ನಟಿ ಶೆರ್ಲಿನ್ ಚೋಪ್ರಾ ಗಂಭೀರ ಆರೋಪ ಮಾಡಿದ್ದಾರೆ.

ಸ್ಥಳೀಯ ಮಾಧ್ಯವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಕುಂದ್ರಾ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

2019ರಲ್ಲಿ ಕುಂದ್ರಾ ನನ್ನ ಮ್ಯಾನೇಜರ್ ಅವರನ್ನು ಸಂಪರ್ಕಿಸಿ ಆ್ಯಪ್ ಬ್ಯುಸಿನೆಸ್ ಮಾಡುವ ಪ್ರಸ್ತಾಪ ಮಾಡಿದ್ದರು. ನನಗೆ ಆ ವ್ಯವಹಾರದ ಬಗ್ಗೆ ಇಷ್ಟವಿರಲಿಲ್ಲ, ಆಗಾಗಿ ಅದನ್ನು ತಿರಸ್ಕರಿಸಿದ್ದೆ. ಒಂದು ದಿನ ರಾಜ್ ಕುಂದ್ರಾ ನನ್ನ ಅನುಮತಿ ಇಲ್ಲದೇ ಮನೆಗೆ ಬಂದಿದ್ದರು. ಆ ವ್ಯವಹಾರ ಬಗ್ಗೆ ಮತ್ತೆ ಪ್ರಸ್ತಾಪ ಮಾಡಿದರು. ಈ ವೇಳೆ ಇಬ್ಬರ ನಡುವೆ ಮಾತು ಬೆಳೆದಿತ್ತು. ನಂತರ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು ಎಂದು ಶೆರ್ಲಿನ್ ಚೋಪ್ರಾ ಆರೋಪಿಸಿದ್ದಾರೆ.

ರಾಜ್ ಕುಂದ್ರಾ ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಶೆರ್ಲಿನ್ ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

ಆ್ಯಪ್‌ಗಳಿಗಾಗಿ ಅಶ್ಲೀಲ ಚಿತ್ರಗಳನ್ನು ತಯಾರಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 19ರಂದು ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ಉದ್ಯಮಿ ರಾಜ್‌ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳೆದ ವರ್ಷ ಆಗಸ್ಟ್ ಮತ್ತು ಡಿಸೆಂಬರ್ ನಡುವೆ ರಾಜ್‌ಕುಂದ್ರಾ ಈ ಉದ್ಯಮದಿಂದ ₹1.17 ಕೋಟಿ ಗಳಿಸಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.