ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಬು ಗರ್ಭಿಣಿ ಅಮೂಲ್ಯ ಜತೆ ಶಿಲ್ಪಾ ಗಣೇಶ್: ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ ವೈರಲ್

Last Updated 5 ಫೆಬ್ರುವರಿ 2022, 11:03 IST
ಅಕ್ಷರ ಗಾತ್ರ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಜಗದೀಶ್‌ ಅವರು ತುಂಬು ಗರ್ಭಿಣಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಅವರ ಬೇಬಿ ಬಂಪ್ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅಮೂಲ್ಯ ಅವರೊಂದಿಗೆ ನಟ ಗಣೇಶ್‌ ಅವರ ಪತ್ನಿ ಶಿಲ್ಪಾ ಫೋಟೊ ಕ್ಲಿಕ್ಕಿಸಿಕೊಂಡಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ನಟ ಗಣೇಶ್​ ಮತ್ತು ಅಮೂಲ್ಯ ಕುಟುಂಬದ ನಡುವೆ ಉತ್ತಮ ಒಡನಾಟ ಇದೆ. ಹಲವು ವಿಶೇಷ ಸಂದರ್ಭಗಳಲ್ಲಿ ಈ ಎರಡೂ ಕುಟುಂಬದ ಸದಸ್ಯರು ಒಟ್ಟಾಗಿ ಸೇರುತ್ತಾರೆ. ಕೆಲ ದಿನಗಳ ಹಿಂದೆ ಅಮೂಲ್ಯ ಅವರ ಸೀಮಂತ ಶಾಸ್ತ್ರ ನೆರವೇರಿತ್ತು.

ಅಮೂಲ್ಯ, ಸ್ಯಾಂಡಲ್‍ವುಡ್‍ಗೆ ಬಾಲನಟಿಯಾಗಿ ಪದಾರ್ಪಣೆ ಮಾಡಿದರು. ಬಳಿಕ ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ನಟಿಯಾಗಿ ಮಿಂಚಿದರು. ಅಮೂಲ್ಯ 2017ರಲ್ಲಿ ಜಗದೀಶ್ ಅವರನ್ನು ಮದುವೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT