ಮಂಗಳವಾರ, ಮಾರ್ಚ್ 28, 2023
30 °C

ನಾನು ಬ್ಯುಸಿಯಾಗಿದ್ದೆ. ಕುಂದ್ರಾ ಕೆಲಸದ ಬಗ್ಗೆ ನನಗೆ ತಿಳಿದಿಲ್ಲ: ಶಿಲ್ಪಾ ಶೆಟ್ಟಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ನಾನು, ನನ್ನ ಕೆಲಸದಲ್ಲಿ ಬ್ಯುಸಿಯಾಗಿರುತ್ತಿದ್ದೆ. ಪತಿ ರಾಜ್ ಕುಂದ್ರಾ ಕೆಲಸಗಳ ಬಗ್ಗೆ ನನಗೆ ತಿಳಿದಿರಲಿಲ್ಲ ಎಂದು ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರು ಮುಂಬೈ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಸಲ್ಲಿಸಿರುವ 1,500 ಪುಟಗಳ ಚಾರ್ಜ್‌ ಶೀಟ್‌ನಲ್ಲಿ ಶಿಲ್ಪಾಶೆಟ್ಟಿ ಹೇಳಿಕೆಯನ್ನು ದಾಖಲಿಸಲಾಗಿದೆ.

ಈ ವರ್ಷದ ಜುಲೈನಲ್ಲಿ, ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳನ್ನು ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು.

ದೋಷಾರೋಪ ಪಟ್ಟಿ ಪ್ರಕಾರ, ಅಶ್ಲೀಲ ಚಿತ್ರಗಳನ್ನು ಅಪ್ಲೋಡ್ ಮಾಡಲು ಮತ್ತು ಸ್ಟ್ರೀಮಿಂಗ್ ಮಾಡಲು ಆರೋಪಿಗಳು ಬಳಸಿದ್ದಾರೆ ಎನ್ನಲಾದ ಹಾಟ್ ಶಾಟ್ಸ್ ಮತ್ತು ಬಾಲಿವುಡ್ ಫೇಮ್ ಆ್ಯಪ್‌ಗಳ ಬಗ್ಗೆ ತನಗೆ ಏನೂ ತಿಳಿದಿಲ್ಲ ಎಂದು ಶಿಲ್ಪಾ ಶೆಟ್ಟಿ ಪೊಲೀಸರಿಗೆ ತಿಳಿಸಿದ್ದಾರೆ.

‘ನಾನು, ನನ್ನ ಕೆಲಸದಲ್ಲಿ ತೊಡಗಿಸಿಕೊಂಡಿರುತ್ತಿದ್ದೆ. ಹಾಗಾಗಿ, ಪತಿ ರಾಜ್ ಕುಂದ್ರಾ ಕೆಲಸದ ಬಗ್ಗೆ ನನಗೆ ತಿಳಿದಿಲ್ಲ’ ಎಂದು ಅವರು ಹೇಳಿದ್ದಾರೆ.

ಕುಂದ್ರಾ ತನ್ನನ್ನು ‘ಯಾವುದೇ ಹಿಂಜರಿಕೆಯಿಲ್ಲದೆ‘ ಹಾಟ್‌ಶಾಟ್ಸ್ ಆ್ಯಪ್‌ಗಾಗಿ ಕೆಲಸ ಮಾಡುವಂತೆ ಕೇಳಿಕೊಂಡಿದ್ದರು ಎಂದು ಇನ್ನೊಬ್ಬ ನಟಿ ಶೆರ್ಲಿನ್ ಚೋಪ್ರಾ ತನ್ನ ಹೇಳಿಕೆಯಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ.

ಹಾಟ್ ಶಾಟ್ಸ್ ಆ್ಯಪ್ 'ಹೆಚ್ಚು ಬೋಲ್ಡ್ ಮತ್ತು ಹಾಟ್ ವಿಡಿಯೊಗಳನ್ನು' ಹೊಂದಿರುತ್ತದೆ ಎಂದು ಆಕೆಗೆ ತಿಳಿಸಲಾಗಿತ್ತು. ಆದರೆ, ಚೋಪ್ರಾ ಅದಕ್ಕಾಗಿ ಕೆಲಸ ಮಾಡಲು ನಿರಾಕರಿಸಿದರು ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು