ಸೋಮವಾರ, ಜೂನ್ 14, 2021
22 °C

‘ಶುಗರ್‌ಫ್ಯಾಕ್ಟರಿ’ ಸೇರಿದ ಗ್ಲಾಮರ್ ಗೊಂಬೆ ಶಿಲ್ಪಾ ಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲವ್‌ ಮಾಕ್ಟೇಲ್‌ ಖ್ಯಾತಿಯ ಡಾರ್ಲಿಂಗ್‌ ಕೃಷ್ಣ ನಟನೆಯ ಶುಗರ್‌ಫ್ಯಾಕ್ಟರಿ ಸಿನಿಮಾದ ಕುರಿತು ದಿನಕ್ಕೊಂದು ಸುದ್ದಿ ಕೇಳಿ ಬರುತ್ತಿದೆ. ಈ ಸಿನಿಮಾವನ್ನು ಖ್ಯಾತ ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಮೂವರು ನಾಯಕಿಯರಿದ್ದು ಕಡಲೂರಿನ ಚೆಲುವೆಯರಾದ ಸೋನಲ್ ಮೊಂತೆರೊ ಹಾಗೂ ಅದ್ವಿತಿ ಶೆಟ್ಟಿ ನಾಯಕಿಯರಾಗಿ ಆಯ್ಕೆಯಾಗಿದ್ದರು. ಮೂರನೇ ನಾಯಕಿ ಯಾರು ಎಂಬ ಕುತೂಹಲಕ್ಕೆ ಈಗ ಬ್ರೇಕ್‌ ಬಿದಿದ್ದು ಗ್ಲಾಮರ್ ಗೊಂಬೆ ಶಿಲ್ಪಾ ಶೆಟ್ಟಿ ಮೂರನೇ ನಾಯಕಿಯಾಗಿ ಶುಗರ್ ಫ್ಯಾಕ್ಟರಿ ಸೇರಿದ್ದಾರೆ.

ಕನ್ನಡ, ತುಳು ಭಾಷೆಯ ಕೆಲವು ಚಿತ್ರಗಳು ಹಾಗೂ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅನುಭವ ಶಿಲ್ಪಾ ಅವರಿಗಿದೆ. ಶುಗರ್‌ಫ್ಯಾಕ್ಟರಿ ಚಿತ್ರದ ಚಿತ್ರೀಕರಣ ಜನವರಿ 28ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ.

ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌ ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು, ಚೇತನ್ ಕುಮಾರ್, ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಮುಂತಾದವರು ಸಾಹಿತ್ಯ ಬರೆಯುತ್ತಿದ್ದಾರೆ. ‌ಕಬೀರ್ ರಫಿ ಸಂಗೀತ ನೀಡುತ್ತಿರುವ ಶುಗರ್ ಫ್ಯಾಕ್ಟರಿಯನ್ನು ಸಂತೋಷ್ ರೈ ಪಾತಾಜೆ ತಮ್ಮ ಛಾಯಾಗ್ರಹಣದ ಮೂಲಕ ಸೆರೆ ಹಿಡಿಯಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು