ಮಂಗಳವಾರ, ಸೆಪ್ಟೆಂಬರ್ 28, 2021
25 °C

ಸಕಾರಾತ್ಮಕ ಚಿಂತನೆಗಳ ಮೂಲಕ ಮುನ್ನಡೆಯಬೇಕು: ಶಿಲ್ಪಾ ಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಪತಿ ರಾಜ್‌ ಕುಂದ್ರಾ ಬಂಧನದ ಬಳಿಕ ಮೊದಲ ಬಾರಿಗೆ ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದಾರೆ. 

ಜೀವನದಲ್ಲಿ ಸಕಾರಾತ್ಮಕ ಚಿಂತನೆಗಳ ಮೂಲಕ ಮುನ್ನಡೆಯಬೇಕು ಎಂದು ಶಿಲ್ಪಾ ಶೆಟ್ಟಿ ಹೇಳಿದ್ದಾರೆ.

ಕೋವಿಡ್‌ ನಿಧಿ ಸಂಗ್ರಹ ಅಭಿಯಾನ ನಡೆಸುತ್ತಿರುವ ’ವಿ ಫಾರ್ ಇಂಡಿಯಾ’ ಸಂಸ್ಥೆಯ ಪರವಾದ ಪ್ರಚಾರ ವಿಡಿಯೊದಲ್ಲಿ ಶಿಲ್ಪಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ಈ ವಿಡಿಯೊದಲ್ಲಿ ಪ್ರಾಣಯಾಮ, ಆರೋಗ್ಯ ಹಾಗೂ ಸಕರಾತ್ಮ ಚಿಂತನೆಗಳ ಬಗ್ಗೆ ಮಾತನಾಡಿದ್ದಾರೆ. ನಾವು ಈಗ ಕಷ್ಟದ ಪರಿಸ್ಥಿತಿಯಲ್ಲಿ ಇದ್ದೇವೆ, ದೈಹಿಕ ಆರೋಗ್ಯ ಕಪಾಡಿಕೊಳ್ಳುವುದರ ಜೊತೆಗೆ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದ್ದಾರೆ.

ನಾವು ಪ್ರಾಣಯಾಮ ಮಾಡುವುದರಿಂದ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುತ್ತದೆ. ಇದರಿಂದ ನಿದ್ರಾಹೀನತೆ ಸಮಸ್ಯೆಗಳು ನಿವಾರಣೆಯಾಗುತ್ತವೆ. ಆ ಮೂಲಕ ಮನಸ್ಸು ಪ್ರಫುಲ್ಲಗೊಂಡು ಧನಾತ್ಮಕ ಚಿಂತನೆಗಳು ಬೆಳೆಯುತ್ತವೆ ಎಂದು ಹೇಳಿದ್ದಾರೆ.

 ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್‌ ಕುಂದ್ರಾ ಅವರ ಬಂಧನವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು