ಬುಧವಾರ, ಸೆಪ್ಟೆಂಬರ್ 22, 2021
24 °C

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ: ನಮ್ಮ ಖಾಸಗಿತನವನ್ನು ಗೌರವಿಸಿ –ಶಿಲ್ಪಾ ಶೆಟ್ಟಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ‘ನಮ್ಮ ಖಾಸಗಿತನವನ್ನು ಜನರು ಗೌರವಿಸಬೇಕು’ ಎಂದು ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರು ಮನವಿ ಮಾಡಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಡಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಅವರು ಬಂಧನಕ್ಕೊಳಗಾಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ಅವರು,‘ ನನಗೆ ಮುಂಬೈ ಪೊಲೀಸ್‌ ಮತ್ತು ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೆ ಸಂಪೂರ್ಣ ನಂಬಿಕೆಯಿದೆ’ ಎಂದು ಹೇಳಿದ್ದಾರೆ.

‘ಒಂದು ಕುಟುಂಬವಾಗಿ, ನಾವು ಕಾನೂನು ಮೊರೆ ಹೋಗುತ್ತಿದ್ದೇವೆ. ನನ್ನ ಮಕ್ಕಳಿಗೋಸ್ಕರವಾದರೂ ಜನರು ನಮ್ಮ ಖಾಸಗಿತನವನ್ನು ಗೌರವಿಸಬೇಕು. ಒಬ್ಬಳು ತಾಯಿಯಾಗಿ ನಾನು ಈ ಮನವಿ ಮಾಡಿಕೊಳ್ಳುತ್ತಿದ್ದೇನೆ. ಸತ್ಯಾಸತ್ಯತೆಗಳನ್ನು ಪರಿಶೀಲಿಸದೆ, ಅಪೂರ್ಣ ಮಾಹಿತಿ ಬಗ್ಗೆ ಪ್ರತಿಕ್ರಿಯಿಸಬೇಡಿ’ ಎಂದು ಅವರು ಕೋರಿದ್ದಾರೆ.

‘ಜನರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನು ಯಾವತ್ತೂ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ. ಆದರೆ, ಈ ಪರಿಸ್ಥಿತಿಯಲ್ಲಿ ನನ್ನ ಮತ್ತು ನನ್ನ ಕುಟುಂಬದವರ ಖಾಸಗಿತನವನ್ನು ಗೌರವಿಸಿ. ನಾವು 'ಮಾಧ್ಯಮ ವಿಚಾರಣೆ'ಗೆ ಅರ್ಹರಲ್ಲ. ದಯವಿಟ್ಟು, ಕಾನೂನಿಗೆ ಕೆಲಸ ಮಾಡಲು ಬಿಡಿ. ಸತ್ಯಮೇವ ಜಯತೇ’ ಎಂದು ಹೇಳಿದ್ದಾರೆ.

‘ನನ್ನ ಬಗ್ಗೆ ಮಾಧ್ಯಮಗಳು ಮತ್ತು ಕೆಲವರು ವಿನಾಕಾರಣ ಆರೋಪಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೇವಲ ನನ್ನ ಬಗ್ಗೆ ಮಾತ್ರವಲ್ಲದೇ ನನ್ನ ಕುಟುಂಬದವರ ಬಗ್ಗೆಯೂ ಟ್ರೋಲಿಂಗ್‌ ಮತ್ತು ಹಲವು ಪ್ರಶ್ನೆಗಳನ್ನು ಮಾಡಲಾಗುತ್ತಿದೆ. ನಾನು ಈ ಪ್ರಕರಣದ ಬಗ್ಗೆ ಯಾವುದೇ ನಿಲುವು ವ್ಯಕ್ತಪಡಿಸಿಲ್ಲ. ಹೇಳಿಕೆ ನೀಡಿಲ್ಲ. ಹಾಗಾಗಿ ನನ್ನ ಹೆಸರನ್ನು ಬಳಸಿ ಸುಳ್ಳು ಹೇಳಿಕೆಗಳನ್ನು ನೀಡಬೇಡಿ’ ಎಂದು ಅವರು ಮನವಿ ಮಾಡಿದ್ದಾರೆ.

ಇವನ್ನೂ ಓದಿ
​* 

​​* 

​* 
​* 
​* 
​* 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು