ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತಿಯ ಬಂಧನದ ನಂತರ ಮೊದಲ ಬಾರಿಗೆ ಸೂಪರ್ ಡ್ಯಾನ್ಸರ್ ಸೆಟ್‌ಗೆ ಮರಳಿದ ಶಿಲ್ಪಾ

Last Updated 18 ಆಗಸ್ಟ್ 2021, 10:36 IST
ಅಕ್ಷರ ಗಾತ್ರ

ಮುಂಬೈ: ಪತಿ ರಾಜ್ ಕುಂದ್ರಾ ಬಂಧನದ ನಂತರ ನಟಿ ಶಿಲ್ಪಾ ಶೆಟ್ಟಿ ಅವರು ಮೊದಲ ಬಾರಿಗೆ ರಿಯಾಲಿಟಿ ಶೋ ಸೂಪರ್ ಡ್ಯಾನ್ಸರ್ ಸೆಟ್‌ಗೆ ಮರಳಿದ್ದಾರೆ.

'ಸೂಪರ್ ಡ್ಯಾನ್ಸರ್ ತಂಡವು ಶಿಲ್ಪಾ ಶೆಟ್ಟಿ ಅವರನ್ನು ತುಂಬಾ ಆತ್ಮೀಯವಾಗಿ ಸ್ವಾಗತಿಸಿತು. ಆ ಸಮಯದಲ್ಲಿ ಶಿಲ್ಪಾ ಅವರು ಭಾವುಕರಾದರು' ಎಂದು ಪ್ರತ್ಯಕ್ಷದರ್ಶಿಯೊಬ್ಬರು ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಶಿಲ್ಪಾ ಶೆಟ್ಟಿ ಅವರು ಸೂಪರ್‌ ಡ್ಯಾನ್ಸರ್‌ ಸೆಟ್‌ಗೆ ತೆರಳುತ್ತಿರುವ ವಿಡಿಯೊ ಅನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ.

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಶಿಲ್ಪಾ ಶೆಟ್ಟಿ ಅವರನ್ನು ವಿವಾಹವಾಗುವುದಕ್ಕೂ ಮುಂಚೆ ರಾಜ್‌ ಕುಂದ್ರಾ ಕವಿತಾರನ್ನು ಮದುವೆಯಾಗಿ ಲಂಡನ್‌ನಲ್ಲಿ ನೆಲೆಸಿದ್ದರು. ಕವಿತಾಗೆ 2006ರಲ್ಲಿ ವಿಚ್ಛೇದನ ನೀಡಿ 2009ರಲ್ಲಿ ಶಿಲ್ಪಾ ಶೆಟ್ಟಿಯನ್ನು ಮದುವೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT