ಗುರುವಾರ , ಜೂನ್ 24, 2021
21 °C

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಪತಿ, ಮಕ್ಕಳಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್‌ ಕುಂದ್ರ ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಶಿಲ್ಪಾ ಶೆಟ್ಟಿ, ‘ಒಂದು ಕುಟುಂಬವಾಗಿ ಕಳೆದ 10 ದಿನ ನಾವು ತೀವ್ರ ಸಂಕಷ್ಟವನ್ನು ಅನುಭವಿಸಿದೆವು. ನನ್ನ ಅತ್ತೆ–ಮಾವನಿಗೆ ಕೋವಿಡ್‌ ದೃಢಪಟ್ಟಿತ್ತು. ಇದಾದ ಬಳಿಕ ಮಕ್ಕಳಾದ ಸಮೀಶಾ, ವಿಯಾನ್‌ ರಾಜ್‌, ನನ್ನ ಅಮ್ಮ ಹಾಗೂ ರಾಜ್‌ಗೂ ಕೋವಿಡ್‌ ದೃಢಪಟ್ಟಿದೆ’ ಎಂದಿದ್ದಾರೆ.

‘ವೈದ್ಯರ ಸಲಹೆ ಮೇಲೆ ಅವರೆಲ್ಲರೂ ಮನೆಯೊಳಗೇ ಪ್ರತ್ಯೇಕ ಕೋಣೆಯಲ್ಲಿದ್ದಾರೆ. ಮನೆಯಲ್ಲಿ ಕೆಲಸಕ್ಕಿದ್ದ ಇಬ್ಬರು ಸಿಬ್ಬಂದಿಗೂ ಕೋವಿಡ್‌ ದೃಢಪಟ್ಟಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಗುಣಮುಖರಾಗುತ್ತಿದ್ದಾರೆ. ನಾನು ಕೂಡ ಕೋವಿಡ್‌ ಪರೀಕ್ಷೆಗೊಳಪಟ್ಟಿದ್ದು, ನೆಗೆಟಿವ್‌ ಬಂದಿದೆ. ಅಭಿಮಾನಿಗಳ ಪ್ರೀತಿ, ಬೆಂಬಲಕ್ಕೆ ಧನ್ಯವಾದ. ಎಲ್ಲರೂ ಮಾಸ್ಕ್‌ ಧರಿಸಿ, ಕೈಗಳನ್ನು ಸ್ವಚ್ಛಗೊಳಿಸಿ ಹಾಗೂ ಸುರಕ್ಷಿತವಾಗಿರಿ. ನಿಮಗೆ ಕೋವಿಡ್‌ ಪಾಸಿಟಿವ್‌ ಆಗಲಿ ಆಗದೇ ಇರಲಿ ಮಾನಸಿಕವಾಗಿ ಸದೃಢವಾಗಿರಿ’ ಎಂದು ಪೋಸ್ಟ್‌ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು