ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಲ್ಪಾ ಶೆಟ್ಟಿ ತಾಯಿಗೆ ಶಸ್ತ್ರ ಚಿಕಿತ್ಸೆ: ನಟಿ ಭಾವನಾತ್ಮಕ ಪತ್ರ

Last Updated 16 ಮಾರ್ಚ್ 2023, 13:29 IST
ಅಕ್ಷರ ಗಾತ್ರ

ಮುಂಬೈ: ಶಸ್ತ್ರಚಿಕಿತ್ಸೆಗೆ ಒಳಗಾದ ತಮ್ಮ ತಾಯಿಯ ಆರೋಗ್ಯಕ್ಕಾಗಿ ಪ್ರಾರ್ಥಿಸುವಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಬುಧವಾರ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ತನ್ನ ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿರುವ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ತನ್ನ ಕುಟುಂಬಕ್ಕೆ ಸಂಕಷ್ಟದ ದಿನಗಳಾಗಿವೆ ಎಂದಿದ್ದಾರೆ.

‘ಪೋಷಕರು ಶಸ್ತ್ರಚಿಕಿತ್ಸೆಗೆ ಒಳಗಾಗುವುದನ್ನು ನೋಡುವುದು ಯಾವುದೇ ಮಕ್ಕಳಿಗಾದರೂ ಸುಲಭವಲ್ಲ. ಆದರೆ, ನನ್ನ ತಾಯಿಯಿಂದ ನಾನು ಏನನ್ನಾದರೂ ಅನುಕರಿಸಲು ಬಯಸಿದರೆ ಅದು ಅವರ ಧೈರ್ಯ ಮತ್ತು ಅವರ ಹೋರಾಟದ ಮನೋಭಾವವಾಗಿದೆ’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

ಶಿಲ್ಪಾ ಶೆಟ್ಟಿ ತಮ್ಮ ತಾಯಿಯ ಶಸ್ತ್ರಚಿಕಿತ್ಸೆಯ ಮಾಹಿತಿಯನ್ನು ಹೆಚ್ಚು ಹಂಚಿಕೊಂಡಿಲ್ಲ. ‘ತನ್ನ ತಾಯಿಯ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಆರೈಕೆ ಮಾಡಿದ್ದಕ್ಕಾಗಿ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ’.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT