‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದ ಟೀಸರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ನಟ ಶಿವರಾಜ್ಕುಮಾರ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಶಿವರಾಜ್ಕುಮಾರ್ ಹಾಗೂ ಡಾಲಿ ಧನಂಜಯ ಅವರು ರೆಟ್ರೊ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಈ ಸಿನಿಮಾದ ಪೋಸ್ಟರ್ಗಳು ಅನಾವರಣಗೊಂಡು ಪ್ರೇಕ್ಷಕರ ಗಮನ ಸೆಳೆದಿವೆ.

ಹೇಮಂತ್ ಎಂ.ರಾವ್ ನಿರ್ದೇಶನದ ಈ ಚಿತ್ರವನ್ನು ವೈಶಾಕ್ ಜೆ ಫಿಲ್ಮ್ಸ್ ಅಡಿಯಲ್ಲಿ ಡಾ.ವೈಶಾಕ್ ಜೆ ಗೌಡ ಅವರು ನಿರ್ಮಾಣ ಮಾಡಿದ್ದಾರೆ. 70ರ ದಶಕದ ಶೈಲಿಯಲ್ಲಿ ಸಿನಿಮಾದ ಚಿತ್ರಕಥೆ ಹೆಣೆಯಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಚಿತ್ರದಲ್ಲಿ ಪ್ರಿಯಾಂಕಾ ಮೋಹನ್ ನಾಯಕಿಯಾಗಿ ನಟಿಸಿದ್ದರೆ, ಬಹುಭಾಷಾ ನಟಿ ಅದಿತಿ ಬಾಲನ್ ಅವರು ತಾರಾಬಳಗದಲ್ಲಿದ್ದಾರೆ.

‘ಟಗರು’ ಚಿತ್ರದಲ್ಲಿ ಶಿವಣ್ಣ ಪೊಲೀಸ್ ಅಧಿಕಾರಿಯಾಗಿ, ಡಾಲಿ ಅವರು ಖಳನಾಯಕನಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರ ಭರ್ಜರಿ ಯಶ್ವಸಿ ಕಂಡಿತ್ತು. ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದ ಮೂಲಕ ಈ ಜೋಡಿ ಮತ್ತೆ ಒಟ್ಟಿಗೆ ತೆರೆ ಹಂಚಿಕೊಂಡಿರುವುದು ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.