ತೆಲುಗಿನ ಖ್ಯಾತ ಸಿನಿಮಾ ನಿರ್ದೇಶಕ ಬುಚ್ಚಿ ಬಾಬು ಸನಾ ಅವರು ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಸೇರಿದಂತೆ ಹಿತೈಷಿಗಳು ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ತಿಳಿಸಿದ್ದರು. ಇವರ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರು ಉಡುಗೊರೆಯೊಂದನ್ನು ನೀಡಿದ್ದಾರೆ.

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಇದೇ ಮಾರ್ಚ್ನಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಕೂಡ ನಟಿಸಿದ್ದಾರೆ. ಹಾಗಾಗಿ ಸಿನಿಮಾ ನಿರ್ದೇಶಕರಿಗೆ ಶಿವಣ್ಣ ಉಡುಗೊರೆ ನೀಡಿ ಶುಭಕೋರಿದ್ದಾರೆ. ಬುಚ್ಚಿ ಬಾಬು ಸನಾ ಅವರಿಗೆ ಶಿವಣ್ಣ ಕಸ್ಟಮ್ ವಾಚ್ ಉಡುಗೊರೆಯಾಗಿ ನೀಡಿದ್ದಾರೆ.

ನಿರ್ದೇಶಕ ಬುಚ್ಚಿ ಬಾಬು ಸನಾ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಟೊಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ಸುಂದರವಾದ ಉಡುಗೊರೆ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು, ಇದು ನಿಜವಾಗಿಯೂ ತುಂಬಾ ಅರ್ಥಪೂರ್ಣವಾಗಿದೆ. ಲವ್ ಯು ಸರ್’ ಎಂದು ಬರೆದಿದ್ದಾರೆ.

2026ರ ಮಾರ್ಚ್ 27ರಂದು ಬಿಡುಗಡೆಯಾಗಲಿರುವ ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಜಯ್ ಸೇತುಪತಿ, ಜಗಪತಿ ಬಾಬು ಕೂಡಾ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ 1980ರ ದಶಕದ ಆಂಧ್ರ ಪ್ರದೇಶದಲ್ಲಿನ ಗ್ರಾಮೀಣ ಭಾಗದ ಕಥೆಯನ್ನು ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.