2023ರ ಏಪ್ರಿಲ್‌ನಲ್ಲಿ ಸೆಟ್ಟೇರಿದ್ದ ಈ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು ಮೂವರೂ ನಾಯಕರು ಭಾಗವಹಿಸಿದ್ದಾರೆ. ಅದ್ಧೂರಿಯಾಗಿ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳದಲ್ಲಿ ತೆರೆಕಾಣಲಿದೆ. ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದ್ದು, ಅವರೇ ಕಥೆ-ಚಿತ್ರಕಥೆ ಬರೆದು ಸಂಗೀತ ಸಂಯೋಜಿಸಿದ್ದಾರೆ. ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ರವಿ ವರ್ಮ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ‘ಒಂದು ದೊಡ್ಡ ಫಿಲಾಸಫಿಯನ್ನು ಸರಳ ರೀತಿಯಲ್ಲಿ, ಕ್ಲಾಸ್ ಮತ್ತು ಮಾಸ್ ಆಗಿ ಹೇಳುವ ಪ್ರಯತ್ನವಿದು’ ಎನ್ನುತ್ತಾರೆ ಅರ್ಜುನ್ ಜನ್ಯ.