ಶುಕ್ರವಾರ, ಫೆಬ್ರವರಿ 21, 2020
18 °C

ಶಿವಾಜಿ ಸುರತ್ಕಲ್‌ ಟ್ರೇಲರ್‌: ರಮೇಶ್‌ ಅರವಿಂದ್‌ ಪತ್ತೆದಾರಿಯಾಗಿ ಬರುತ್ತಿದ್ದಾರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಮೇಶ್‌ ಅರವಿಂದ್‌ ಅವರು ಬಣ್ಣದಲೋಕ ಪ್ರವೇಶಿಸಿ ಮೂರು ದಶಕಗಳಾಗಿದ್ದು ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ 101ನೇ ಸಿನಿಮಾ ಶಿವಾಜಿ ಸುರತ್ಕಲ್‌. ಈ ಚಿತ್ರದ ಟ್ರೇಲರ್‌ ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. 

ಶಿವಾಜಿ ಸುರತ್ಕಲ್‌ ಚಿತ್ರದಲ್ಲಿ ರಮೇಶ್‌ ಅರವಿಂದ್‌ ಪತ್ತೇದಾರಿಯಾಗಿ ಬಣ್ಣ ಹಚ್ಚಿದ್ದಾರೆ. ರೊಮ್ಯಾಂಟಿಕ್‌, ಆ್ಯಕ್ಷನ್‌, ಥ್ರಿಲ್ಲರ್‌ ಚಿತ್ರಗಳಲ್ಲಿ ನಟಿಸಿರುವ ಅವರಿಗೆ ಈ ಪಾತ್ರ ವಿಭಿನ್ನವಾಗಿದೆ. ಟ್ರೇಲರ್‌ ಬಿಡುಗಡೆಯಾಗಿ 21 ಗಂಟೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. 

ರೇಖಾ ಕೆ.ಎನ್. ಮತ್ತು ಅನೂಪ್ ಗೌಡ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಆಕಾಶ್‌ ಶ್ರೀವತ್ಸ ಅವರು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದು ಜಯಂತ ಕಾಯ್ಕಿಣಿ ಎರಡು ಹಾಡುಗಳನ್ನು ಬರೆದಿದ್ದಾರೆ. 

ಕಳೆದ ವರ್ಷ ಅವರು ಸಿನಿಮಾವು ಬಿಡುಗಡೆಯಾಗಿರಲಿಲ್ಲ. ಇದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು. ಶಿವಾಜಿ ಸುರತ್ಕಲ್‌ ಸಿನಿಮಾ ಬರುವ ಫೆಬ್ರುವರಿ 21ಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಅಭಿಮಾನಿಗಳಲ್ಲಿ ಸಂತಸ ಮೂಡಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು