ಸೋಮವಾರ, ಡಿಸೆಂಬರ್ 5, 2022
22 °C

ಶಿವಣ್ಣ- ಉಪೇಂದ್ರ ಹೊಸ ಸಿನಿಮಾ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

‘ಓಂ’ನಂತಹ ಸೂಪರ್‌ ಹಿಟ್‌ ಚಿತ್ರವನ್ನು ನೀಡಿದ ಶಿವರಾಜ್‌ಕುಮಾರ್‌ ಹಾಗೂ ಉಪೇಂದ್ರ ಮತ್ತೊಂದು ಚಿತ್ರಕ್ಕಾಗಿ ಜೊತೆಯಾಗಿದ್ದಾರೆ. ಆದರೆ ಉಪೇಂದ್ರ ನಿರ್ದೇಶನ ಮಾಡುತ್ತಿಲ್ಲ, ಬದಲಿಗೆ ಅರ್ಜುನ್‌ ಜನ್ಯ ನಿರ್ದೇಶನದ ‘45’ ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ. ಗಾಳಿಪಟ–2 ಭರ್ಜರಿ ಯಶಸ್ಸಿನ ಬಳಿಕ ನಿರ್ಮಾಪಕ ರಮೇಶ್‌ ರೆಡ್ಡಿ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಶಿವಣ್ಣ ಮತ್ತು ಉಪೇಂದ್ರ ಜೊತೆಯಾಗಿ ಕೆಲಸ ಮಾಡುತ್ತಿರುವುದು ಇದು ನಾಲ್ಕನೇ ಬಾರಿ. ‘ಓಂ’ ಚಿತ್ರದ ಬಳಿಕ ಇಬ್ಬರೂ ‘ಪ್ರೀತ್ಸೆ’ ಮತ್ತು ‘ಲವ-ಕುಶ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ‌ಬಹಳ ವರ್ಷಗಳ ನಂತರ ಅವರಿಬ್ಬರೂ ‘45’ ಚಿತ್ರದಲ್ಲಿ ಮತ್ತೆ ಒಟ್ಟಾಗಿ ನಟಿಸಲಿದ್ದಾರೆ.

ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಣೆಯಾದ ‘45’, ಈಗ ಪ್ರಾರಂಭಿಕ ಹಂತದಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣವು ಡಿಸೆಂಬರ್‌ನಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.