ಭಾನುವಾರ, ಜನವರಿ 19, 2020
26 °C

ಶಿವರಾಜ್‌ ಕುಮಾರ್‌ ಅಭಿನಯದ 'ಭಜರಂಗಿ 2' ಸಿನಿಮಾ ಸೆಟ್‌ಗೆ ಬೆಂಕಿ, ಅಪಾಯ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಿವರಾಜ್‌ ಕುಮಾರ್‌ ಅಭಿನಯದ ಬಹುನಿರೀಕ್ಷಿತ ಚಿತ್ರ 'ಭಜರಂಗಿ 2‘ ಸಿನಿಮಾ ಸೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಚಿತ್ರತಂಡ ಹೇಳಿದೆ.

1 ಕೋಟಿ ರೂಪಾಯಿ ವೆಚ್ಚದ ಗುಹೆ ಸೆಟ್‌ನಲ್ಲಿ ಶೂಟಿಂಗ್‌ ನಡೆಯುತ್ತಿತ್ತು. ಸೆಟ್‌ನ ಮೇಲಿನ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ನಂದಿಸಲಾಯಿತು ಎಂದು ಚಿತ್ರದ ನಿರ್ದೇಶಕ ಹರ್ಷ ತಿಳಿಸಿದ್ದಾರೆ. ಲೈಟ್‌ಗಳ ಬಿಸಿಯಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಹೇಳಿದ್ದಾರೆ.

ಖಾಸಗಿ ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿದ ನಟ ಶಿವರಾಜ್‌ ಕುಮಾರ್‌ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಇಂದು ಶೂಟಿಂಗ್‌ ನಿಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಶಿವರಾಜ್‌ ಕುಮಾರ್‌ ಸೇರಿದಂತೆ 100ಕ್ಕೂ ಹೆಚ್ಚು ಜನರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು