ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಣ್ಣ ಜನ್ಮದಿನಕ್ಕೆ ಪೋಸ್ಟರ್ ಬಿಡುಗಡೆ

Last Updated 12 ಜುಲೈ 2020, 15:34 IST
ಅಕ್ಷರ ಗಾತ್ರ

ಶಿವರಾಜ್‌ ಕುಮಾರ್ ಅವರ ಜನ್ಮದಿನ ಜುಲೈ 12. ಅವರು ನಟಿಸಲಿರುವ ನೂತನ ಚಿತ್ರದ ಪೋಸ್ಟರ್ ಭಾನುವಾರ (ಜುಲೈ 12) ಬಿಡುಗಡೆಯಾಗಿದೆ. ಶಿವಣ್ಣ ಅವರೇ ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ನೂತನ ಚಿತ್ರದ ಹೆಸರು ‘ಪ್ರೊಡಕ್ಷನ್ ನಂ 1’. ಇದನ್ನು ತೆಲುಗಿನ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನರಳ ಶ್ರೀನಿವಾಸ ರೆಡ್ಡಿ ಅವರು ಬಾಲಶ್ರೀರಾಮ್ ಸ್ಟುಡಿಯೋ ಲಾಂಛನದಲ್ಲಿ ನಿರ್ಮಿಸುತ್ತಿದ್ದಾರೆ. ಕುಡಿಪುಡಿ ವಿಜಯಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಭಾವುಕತೆ ಹಾಗೂ ಮಿಲಿಟರಿ ಹಿನ್ನೆಲೆಯ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಾಮ್ ದುಲಿಪುಡಿ ನಿರ್ದೇಶಿಸುತ್ತಿದ್ದಾರೆ.ತೆಲುಗಿನಲ್ಲಿ ಹಲವು ಚಿತ್ರಗಳನ್ನು ನಿರ್ದೇಶಿಸಿರುವ ಇವರಿಗೆ ಇದು ಕನ್ನಡದಲ್ಲಿ ಮೊದಲ ಸಿನಿಮಾ. ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಸಿಕ್ಕ ನಂತರ ಚಿತ್ರೀಕರಣದ ಕೆಲಸ ಆರಂಭವಾಗಲಿದೆ. ಚಿಕ್ಕಮಗಳೂರು, ಕಾಶ್ಮೀರ ಹಾಗೂ ಅಮೆರಿಕದಲ್ಲಿ ಚಿತ್ರೀಕರಣ ನಡೆಯಲಿದೆ.

ಈ ಚಿತ್ರದ ನಾಯಕಿಯಾಗಿ ಖ್ಯಾತ ನಟಿಯೊಬ್ಬರು ಕಾಣಿಸಿಕೊಳ್ಳಲಿದ್ದಾರಂತೆ. ಆದರೆ ಅವರ ಹೆಸರನ್ನು ಚಿತ್ರತಂಡ ತಿಳಿಸಿಲ್ಲ. ನಾಯಕಿ ಸೇರಿದಂತೆ ಉಳಿದ ಕಲಾವಿದರ ವಿವರಗಳನ್ನು ‘ಸದ್ಯದಲ್ಲೇ ತಿಳಿಸಲಾಗುವುದು’ ಎಂದು ತಂಡ ಹೇಳಿದೆ.ಶ್ರೀಚರಣ್ ಪಕಾಲ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ರವಿಕುಮಾರ್ ಸನಾ ಅವರ ಛಾಯಾಗ್ರಹಣ ಚಿತ್ರಕ್ಕೆ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT